ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಿಂದಿ ಹಾಡು ಪ್ರಸಾರ: ಎಫ್‌ಎಂ ಕೇಂದ್ರಕ್ಕೆ ಕರವೇ ದಾಳಿ
ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ಇಲ್ಲಿನ ಎಫ್‌ಎಂ ರೇಡಿಯೋ ಕೇಂದ್ರದಲ್ಲಿ ಹಿಂದಿ ಹಾಡುಗಳನ್ನು ಪ್ರಸಾರ ಮಾಡಿರುವುದನ್ನು ಖಂಡಿಸಿದ ಕನ್ನಡ ರಕ್ಷಣಾ ವೇದಿಕೆ ಸದಸ್ಯರು ಶನಿವಾರ ಬೆಳಿಗ್ಗೆ ಏಕಾಏಕಿ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ.

ಮೈಸೂರಿನ ಎಫ್ಎಂ 93.5ರೇಡಿಯೋದಲ್ಲಿ ಹಿಂದಿ ಹಾಡುಗಳನ್ನು ಪ್ರಸಾರ ಮಾಡಿರುವುದನ್ನು ಆಲಿಸಿದ ಕನ್ನಡ ರಕ್ಷಣಾ ವೇದಿಕೆಯ ಸುಮಾರು 30 ಮಂದಿ ಕಾರ್ಯಕರ್ತರು ಕೇಂದ್ರಕ್ಕೆ ದಾಳಿ ನಡೆಸಿ, ಕಂಪ್ಯೂಟರ್, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ ನಷ್ಟವುಂಟಾಗಿದೆ.

ಈ ಸಂದರ್ಭದಲ್ಲಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗಳ ಮೇಲೂ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದ್ದು, ಸೆಕ್ಯೂರಿಟಿ ರಘು ಎಂಬವರ ಮೇಲೆ ಹಲ್ಲೆ ನಡೆಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅರ್ಧಗಂಟೆಗಳ ಕಾಲ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ದಾಂಧಲೆ ನಡೆಸಿದ್ದು, ಕೇಂದ್ರದಲ್ಲಿ ಕರ್ತವ್ಯ ನಿರತರಾಗಿದ್ದ ನೌಕರರು ಭಯಭೀತರಾಗಿದ್ದು, ಅವರನ್ನು ಪೊಲೀಸರ ನೆರವಿನಿಂದ ಸುರಕ್ಷಿತ ಸ್ಥಳಕ್ಕೆ ಒಯ್ಯಯಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರದಾನ
ನಾಡಿನಾದ್ಯಂತ ರಾಜ್ಯೋತ್ಸವ ಸಂಭ್ರಮ
ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಪಂಚಕೋಟಿ ಕನ್ನಡಿಗರ ಜಯ: ಸಿಎಂ