ಮಾಲೂರಿನಲ್ಲಿ ಆರಂಭಿಸಿರುವ ದಿನದ 24 ಗಂಟೆಯೂ ನಿರಂತರ ವಿದ್ಯುತ್ ಯೋಜನೆಯನ್ನು ಮುಂದಿನ 2 ವರ್ಷಗಳಲ್ಲಿ ರಾಜ್ಯದ ಎಲ್ಲಾ ಹಳ್ಳಿಗಳಿಗೆ ವಿಸ್ತರಿಸಲಾಗುವುದು ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದ 24ಗಂಟೆಯ ನಿರಂತರ ವಿದ್ಯುತ್ ಯೋಜನೆಗಾಗಿ ಮಾಲೂರ ಹೊರತುಪಡಿಸಿ ಬೈಲಹೊಂಗಲ, ಮಳವಳ್ಳಿ, ಕೊಪ್ಪಳಗಳನ್ನು ಆಯ್ಕೆ ಮಾಡಲಾಗಿದ್ದು, ಉಪಚುನಾವಣೆ ನಂತರ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ತಿಳಿಸಿದರು.
ಅಲ್ಲದೆ, ಈ ಮೂಲಕ ಮುಂದಿನ 2 ವರ್ಷಗಳಲ್ಲಿ ಈ ಯೋಜನೆಯನ್ನು ರಾಜ್ಯದ ಎಲ್ಲಾ ಹಳ್ಳಿಗಳಿಗೆ ವಿಸ್ತರಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳ ಪರೀಕ್ಷಾ ಹಿನ್ನೆಲೆಯಲ್ಲಿ ಸಂಜೆ 6ರಿಂದ 10ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ ಅವರು, ವಿದ್ಯುತ್ ಕ್ಷಾಮ ನಿವಾರಿಸಲು ಎಲ್ಲಾ ಪ್ರಯತ್ನ ಕೈಗೊಳ್ಳಲಾಗುವುದು ಎಂದು ವಿವರಿಸಿದರು. |