ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉನ್ನಿಕೃಷ್ಣನ್ ಕುಟುಂಬಕ್ಕೆ ನೆರವು: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉನ್ನಿಕೃಷ್ಣನ್ ಕುಟುಂಬಕ್ಕೆ ನೆರವು: ಯಡಿಯೂರಪ್ಪ
ಮುಂಬೈನಲ್ಲಿ ಉಗ್ರರೊಂದಿಗಿನ ಸೆಣಸಾಟದಲ್ಲಿ ವೀರ ಮರಣವನ್ನಪ್ಪಿದ್ದ ರಾಷ್ಟ್ರೀಯ ಭದ್ರತಾ ಪಡೆಯ(ಎನ್‌ಎಸ್‌ಜಿ) ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಕುಟುಂಬಕ್ಕೆ ಸಕಲ ನೆರವು ನೀಡಲು ರಾಜ್ಯ ಸರಕಾರ ಮುಂದಾಗಿದೆ.

ಸಂದೀಪ್ ಉನ್ನಿಕೃಷ್ಣನ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ವೇಳೆ,ಸಂದೀಪ್‌ಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಮುಂಬೈನಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಟದಲ್ಲಿ ಮೃತಪಟ್ಟಿರುವ ಸಂದೀಪ್ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ ಅವರು, ಉಗ್ರರೊಂದಿಗೆ ಸೆಣಸಾಟದಲ್ಲಿ ಅಪ್ರತಿಮ ಹೋರಾಟ ನಡೆಸಿದ ಸಂದೀಪ್ ಅವರ ಕಾರ್ಯಕ್ಷಮತೆಯನ್ನು ಕೊಂಡಾಡಿದರು.

ಧೀರಯೋಧನಿಗೆ ಅಂತಿಮ ನಮನ:

ಮುಂಬೈ ಕಾಳಗದಲ್ಲಿ ವೀರಮರಣ ಹೊಂದಿದ ಸಂದೀಪ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ ಸಕಲ ಸರಕಾರಿ ಗೌರವದೊಂದಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ಅನಂತ್ ಕುಮಾರ್, ಸಚಿವರಾದ ಸುರೇಶ್ ಕುಮಾರ್, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಹಲವು ನಾಯಕರು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
2ವರ್ಷಗಳಲ್ಲಿ ಹಳ್ಳಿಗಳಿಗೆ ನಿರಂತರ ವಿದ್ಯುತ್: ಈಶ್ವರಪ್ಪ
ವಿಧಾನ ಪರಿಷತ್ತಿಗೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ
ಕೊಡಗಿನಲ್ಲಿ ಶಂಕಿತ 3 ಉಗ್ರರ ಬಂಧನ
ಸ್ಫೋಟ ಹಿನ್ನೆಲೆ: ಕರಾವಳಿಯಾದ್ಯಂತ ಕಟ್ಟೆಚ್ಚರ
ಚರ್ಚ್ ಸ್ಫೋಟ: ದೀನ್‌ದಾರ್‌ನ 11 ಆರೋಪಿಗಳಿಗೆ ಗಲ್ಲು
ಉಗ್ರರ ಮುಂದಿನ ಗುರಿ ಬೆಂಗಳೂರು?