ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮುಂಬೈ ದಾಳಿ: ಬೆಂಗಳೂರಿನಲ್ಲಿ ಅಕ್ಮಲ್ ವಿಚಾರಣೆ ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮುಂಬೈ ದಾಳಿ: ಬೆಂಗಳೂರಿನಲ್ಲಿ ಅಕ್ಮಲ್ ವಿಚಾರಣೆ ?
ಮುಂಬೈ ನಡೆದ ಭಯೋತ್ಪಾದನಾ ದಾಳಿ ವೇಳೆ ಸೆರೆ ಸಿಕ್ಕಿರುವ ಉಗ್ರ ಅಕ್ಮಲ್ ಕಮಾಲ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ನಗರಕ್ಕೆ ಕರೆ ತರಲು ಪೊಲೀಸರು ನಿರ್ಧರಿಸಿದ್ದಾರೆ.

ಈ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳ ತಂಡ ಮುಂಬೈಗೆ ತೆರಳಿ ಅಲ್ಲಿನ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು ಸರಣಿ ಬಾಂಬ್ ಸ್ಫೋಟಕ್ಕೂ ಅಕ್ಮಲ್‌ಗೂ ಸಂಬಂಧವಿರುವ ಬಗ್ಗೆ ಶಂಕಿಸಲಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಪೊಲೀಸರು ತನಿಖೆ ಪೂರ್ಣಗೊಳಿಸಿ ಅಕ್ಮಲ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಬಾಡಿ ವಾರೆಂಟ್ ಪಡೆದು ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ರಾಜ್ಯದಲ್ಲಿ ಕೃಷಿ ಉದ್ಯೋಗ ಸೃಷ್ಟಿಗೆ ರೈತ ಸಂಘ ಒತ್ತಾಯ
ಸಾಮೂಹಿಕ ಮ‌ೂತ್ರ ವಿಸರ್ಜನೆ: ವಾಟಾಳ್ ವರಸೆ
ಉನ್ನಿಕೃಷ್ಣನ್ ಕುಟುಂಬಕ್ಕೆ ನೆರವು: ಯಡಿಯೂರಪ್ಪ
2ವರ್ಷಗಳಲ್ಲಿ ಹಳ್ಳಿಗಳಿಗೆ ನಿರಂತರ ವಿದ್ಯುತ್: ಈಶ್ವರಪ್ಪ
ವಿಧಾನ ಪರಿಷತ್ತಿಗೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ