ರಾಜ್ಯದ ಏಳು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಆಡಳಿತರೂಢ ಬಿಜೆಪಿ ಸರಕಾರ ನಾಲ್ಕು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ, ಸರಕಾರ ಮತ್ತೆ ವರ್ಗಾವಣೆಯನ್ನು ಮುಂದುವರಿವಸಿದ್ದು, ಮೂರು ಕೆಎಎಸ್ ಹಾಗೂ ಓರ್ವ ಗ್ರಾಮೀಣಾಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ.
ಈಗಾಗಲೇ ಆಡಳಿತರೂಢ ಸರಕಾರ ಸಾವಿರಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದರಿಂದ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿತ್ತು. ಇದೀಗ ಸರಕಾರ ಮತ್ತೆ ವರ್ಗಾವಣೆಗೆ ಮುಂದಾಗಿದೆ.
ಈ ಕ್ರಮವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿವೆ. |