ಮುಂಬೈ ಉಗ್ರರ ದಾಳಿ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಹೊಣೆಯನ್ನು ಸಾಮೂಹಿಕವಾಗಿ ಹೊರಬೇಕು. ಇದಕ್ಕಾಗಿ ಕೇಂದ್ರ ಗೃಹಮಂತ್ರಿಗಳು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಿವರಾಜ್ ಪಾಟೀಲ್ ತಲೆದಂಡದಿಂದ ಏನೂ ಆಗುವುದಿಲ್ಲ. ಈ ಘಟನೆಗೆ ಒಬ್ಬರನ್ನು ಗುರಿಪಡಿಸುವ ಬದಲು ಸಂಘಟಿತ ಹೋರಾಟ ಅಗತ್ಯ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶೀಘ್ರವೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಆಂತರಿಕ ಭದ್ರತೆ ಹಾಗೂ ಉಗ್ರರ ನಿಗ್ರಹ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಮುಂಬೈನಂತಹ ಘಟನೆ ರಾಜ್ಯದಲ್ಲಿ ಮರುಕಳಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಿದ ಅವರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಭಯೋತ್ಪಾದನೆ ಹತ್ತಿಕ್ಕಲು ರಾಜ್ಯ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಉತ್ತರಿಸಿದರು. |