ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಣಿ ಲೂಟಿಕೋರರ ವಿರುದ್ಧ ಕ್ರಮಕ್ಕೆ ಸಮಿತಿ: ಸಿ.ಎಂ.
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಣಿ ಲೂಟಿಕೋರರ ವಿರುದ್ಧ ಕ್ರಮಕ್ಕೆ ಸಮಿತಿ: ಸಿ.ಎಂ.
ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖವಾಗಿರುವಂತೆ ತಪ್ಪಿತಸ್ಥರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲು ಸಮಿತಿಯೊಂದನ್ನು ರಚಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಯಲ್ಲಿ ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆಯಲ್ಲಿ ಯಾವ ಯಾವ ನಾಯಕರ ಪಾತ್ರವಿದೆ ಎಂಬುದು ಲೋಕಾಯುಕ್ತರು ನಡೆಸಿರುವ ತನಿಖಾ ವರದಿಯಲ್ಲಿ ಪತ್ತೆಯಾಗಿದೆ. ಊಹೆಗೂ ನಿಲುಕದ ವ್ಯಕ್ತಿಗಳು ಅಕ್ರಮ ಗಣಿಗಾರಿಕೆ ದಂಧೆಯಲ್ಲಿ ಪಾಲ್ಗೊಂಡಿರುವುದು ಆತಂಕದ ಸಂಗತಿ. ಅಧಿಕಾರಿಗಳೂ ಈ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಬೆಳಕಿಗೆ ಬಂದಿದ್ದು, ಈ ಎಲ್ಲ ತಪ್ಪಿತ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಮಿತಿಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಸದಸ್ಯರಿದ್ದು, ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಮಿತಿ ನೀಡುವ ಶಿಫಾರಸಿನಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರೊಂದಿಗೂ ಚರ್ಚಿಸುವುದಾಗಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಣಿಯಲ್ಲಿ ‘ಕೈ’ವಾಡ: ಧರಂ ಉತ್ತರ ಸೋಮವಾರ
ಖೇಣಿಯಿಂದ ಹಗಲು ದರೋಡೆ ತಡೆಯಿರಿ: ಶಾಸಕ
ಯಾರ ಜೊತೆಗೂ ಮುನಿಸಿಲ್ಲ: ಸಿದ್ದರಾಮಯ್ಯ
ವಶಪಡಿಸಿಕೊಂಡಿದ್ದ 20 ಲಕ್ಷ ಮರಳಿ ಜೆಡಿಎಸ್‌ಗೆ
ಸಿಇಟಿ ರದ್ದತಿಗೆ ಚಿಂತನೆ: ಸಚಿವ ರಾಮಚಂದ್ರಗೌಡ
ಕುರುಬರ ಮತಯಾಚಿಸಿದ ವರ್ತೂರು: ಕಾಂಗ್ರೆಸ್ ತರಾಟೆ