ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ವಿಜಯ ದೀಕ್ಷಾ ಅಭಿಯಾನಕ್ಕೆ ಚಾಲನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ವಿಜಯ ದೀಕ್ಷಾ ಅಭಿಯಾನಕ್ಕೆ ಚಾಲನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ 14 ತಂಡಗಳು ವಿವಿಧ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಜಯ ದೀಕ್ಷಾ ಅಭಿಯಾನಕ್ಕೆ ಬುಧವಾರ ಚಾಲನೆ ದೊರೆತಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವುದರ ಜತೆಗೆ ಬಹಿರಂಗ ಸಭೆಗಳನ್ನು ನಡೆಸಿ ಪಕ್ಷವನ್ನು ಸಂಘಟಿಸಲು ಹಿರಿಯ ನಾಯಕರ ನೇತೃತ್ವದಲ್ಲಿ 14 ತಂಡಗಳನ್ನು ರಚಿಸಲಾಗಿದೆ.

ಪ್ರಧಾನಿ ಡಾ| ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಸರ್ಕಾರದ ಸಾಧನೆಗಳು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರದ ದುರುಪಯೋಗ ಹಾಗೂ ಎನ್ಡಿಎ ದಿನೇ ದಿನೇ ದುರ್ಬಲಗೊಳ್ಳುತ್ತಿರುವ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಿರುತೆರೆ ಕಲಾವಿದರು ಕಾಂಗ್ರೆಸ್ ಸೇರ್ಪಡೆ: ಹಾಸ್ಯ ಕಲಾವಿದ ಮಿಮಿಕ್ರಿ ದಯಾನಂದ ಹಾಗೂ ಶಂಖಾನಂದ ಆಂಜನಪ್ಪ ಸೇರಿದಂತೆ ಒಟ್ಟು 58 ಮಂದಿ ಸಿನಿಮಾ ಹಾಗೂ ಕಿರುತೆರೆ ಕಲಾವಿದರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳು ಹಾಗೂ ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಅವರ ನಾಯಕತ್ವವನ್ನು ಒಪ್ಪಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿಗೆ ಮಸಿ ಬಳಿಯಲು ಕಾಂಗ್ರೆಸ್ ಸಂಚು: ಧನಂಜಯ್
ಸಂಸ್ಕೃತಿ ರಕ್ಷಿಸುವ ಗುತ್ತಿಗೆ ಶ್ರೀರಾಮಸೇನೆಗೆ ಬೇಡ: ಕೃಷ್ಣ
ಫೆ.20ರಂದು ರಾಜ್ಯ ಬಜೆಟ್ ಮಂಡನೆ
75ನೇ ಸಾಹಿತ್ಯ ತೇರಿಗೆ ವಿಧ್ಯುಕ್ತ ಚಾಲನೆ
ಪತ್ರಕರ್ತನ ಬಿಡುಗಡೆ
ಫೆ. 19ರಿಂದ ಬಜೆಟ್ ಅಧಿವೇಶನ