ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನನಗೆ ಮುಸ್ಲಿಮರ ಮತ ಬೇಡ: ಅನಂತಕುಮಾರ್ ಹೆಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನನಗೆ ಮುಸ್ಲಿಮರ ಮತ ಬೇಡ: ಅನಂತಕುಮಾರ್ ಹೆಗಡೆ
ನನಗೆ ಹಿಂದೂಗಳ ಮತ ಮಾತ್ರ ಸಾಕು. ಅಲ್ಪಸಂಖ್ಯಾತರ ಮತ ಬೇಡ ಎಂದು ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೆ. ಈ ಬಗ್ಗೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಲಿ ಎಂದು ಸಂಸದ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ.

ಭಾನುವಾರ ಸ್ಥಳೀಯ ಸಮಾಜ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಮತದ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆಯ ಪ್ರತಿಯೊಂದು ಶಬ್ದಕ್ಕೂ ನಾನು ಬದ್ದ ಎಂದು ಸ್ಪಷ್ಟಪಡಿಸಿದರು.

ಅಲ್ಪಸಂಖ್ಯಾತರ ಮತಕ್ಕಾಗಿ ಕೆಲವರು ಅವರನ್ನು ತುಷ್ಟೀಕರಣ ಮಾಡುವುದಾದರೆ, ನಾನು ಬಹುಸಂಖ್ಯಾತರಿಗಾಗಿ ರಾಜಕಾರಣ ಮಾಡುತ್ತೇನೆ. ಶ್ರೀರಾಮನಿಗೋಸ್ಕರ, ಶ್ರೀಕೃಷ್ಣನಿಗೋಸ್ಕರ ರಾಜಕಾರಣ ಮಾಡುತ್ತೇನೆ ಎಂದು ಹೇಳಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯೊಂದರಲ್ಲಿ ಪಕ್ಷದ ಅನೇಕರು ತಮ್ಮೊಡನೆ ಮಾತನಾಡಿ, ಈ ಹೇಳಿಕೆಗಾಗಿ ಧನ್ಯವಾದ ಸಲ್ಲಿಸಿದ್ದಾರೆ ಎಂದ ಅವರು, ಈ ಹೇಳಿಕೆ ಕುರಿತಂತೆ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ದೂರು ನೀಡಿದ್ದಾರೆ ಎಂದು ಲೇವಡಿ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಟ್ಟಿ ಬಿಡುಗಡೆ: ಕಾಂಗ್ರೆಸ್‌‌ನಲ್ಲಿ ಭುಗಿಲೆದ್ದ ಭಿನ್ನಮತ
ಉಳ್ಳಾಲದಲ್ಲಿ ದಾವೂದ್ ಸಹಚರರ ಬಂಧನ
ಕಾಂಗ್ರೆಸ್ ವಿರುದ್ಧ ರಾಜಕೀಯ ಧ್ರುವೀಕರಣ: ಅನಂತ್
ಕಾಂಗ್ರೆಸ್, ಜೆಡಿಎಸ್‌ ಅಸ್ತಿತ್ವ ಕಳೆದುಕೊಳ್ಳಲಿವೆ: ಯಡ್ಡಿ
ಲೋಕಸಭಾ ಚುನಾವಣೆ: ಕೊನೆಗೂ ಕಾಂಗ್ರೆಸ್ ಪಟ್ಟಿ ಪ್ರಕಟ
ಸರ್ಕಾರದಿಂದ ಹೌಸಿಂಗ್ ಬೋರ್ಡ್ ಹಗರಣ: ಕುಮಾರಸ್ವಾಮಿ