' ಹಿಂದುತ್ವದ ವಿರೋಧಿ ಹೇಳಿಕೆ ನೀಡುವವರ ಕತ್ತು ಕತ್ತರಿಸಬೇಕು' ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹಿಂದುತ್ವ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಹಿಂದುತ್ವದ ವಿರುದ್ಧ ಹೇಳಿಕೆ ನೀಡುವವರ ತಲೆ ಕತ್ತರಿಸಬೇಕು ಎಂದು ತಿಳಿಸಿದ್ದರು.ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆಂಬುದಾಗಿ ಸೆಕ್ಟರ್ ಮ್ಯಾಜಿಸ್ಟ್ರೇಟ್‌ರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ರೇಣುಕಾಚಾರ್ಯ ವಿರುದ್ಧ ಐಪಿಸಿ ಸೆಕ್ಷನ್ 153, 125ರಡಿ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದರು.ಪಿಲಿಭಿಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಮುಸ್ಲಿಮರ ವಿರುದ್ಧ ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗುವ ಮೂಲಕ ಅದರ ಮುಂದುವರಿದ ಭಾಗ ಎಂಬಂತೆ, ರಾಜ್ಯದ ಬಿಜೆಪಿ ಸಂಸದ ಕಾರವಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಕೂಡ ಮುಸ್ಲಿಮರ ಮತದ ಅಗತ್ಯವಿಲ್ಲ ಎಂದಿದ್ದರು. ಹಾಗೆಯೇ ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕತ್ತರಿಸಬೇಕು ಎಂದು ಕಾಗೋಡು ತಿಮ್ಮಪ್ಪ ಪ್ರಚೋದನಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಶಾಸಕ ರೇಣುಕಾಚಾರ್ಯ ಕಾಗೋಡು ವಿರುದ್ಧ ಹರಿಹಾಯ್ದು, ಹಿಂದುತ್ವದ ವಿರುದ್ಧ ಮಾತನಾಡುವವರ ತಲೆ ಕತ್ತರಿಸಬೇಕು ಎಂಬ ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.ರೇಣುಕಾಚಾರ್ಯ ಸುದ್ದಿಗಾಗಿ ಕ್ಲಿಕ್ ಮಾಡಿhttp://kannada.webdunia.com/newsworld/news/regional/0904/05/1090405023_1.htm |