ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಡಿಯೂರಪ್ಪ ಮೇಲೆ ಚಪ್ಪಲಿ ತೂರುವ ಯತ್ನ!
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ಮೇಲೆ ಚಪ್ಪಲಿ ತೂರುವ ಯತ್ನ!
ಆರೋಪಿ ಚಂದ್ರಶೇಖರ್ ಪೊಲೀಸ್ ವಶಕ್ಕೆ
NRB
ಪ್ರಧಾನಿ ಮನಮೋಹನ್ ಸಿಂಗ್ ಅವರತ್ತ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶೂ ಎಸೆಯುವ ಯತ್ನ ನಡೆಸಿದ ಘಟನೆಯ ಬೆನ್ನಲ್ಲೇ, ರಾಜಕಾರಣಿಗಳ ಮೇಲೆ ಶೂ, ಚಪ್ಪಲಿ ಎಸೆಯುವ ಪಿಡುಗು ಇದೀಗ ರಾಜ್ಯಕ್ಕೂ ಹಬ್ಬಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರತ್ತ ವ್ಯಕ್ತಿಯೊಬ್ಬ ಚಪ್ಪಲಿ ಎಸೆಯುವ ಯತ್ನ ನಡೆಸಿದ ಘಟನೆ ಮಂಗಳವಾರ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣ ವಿರುದ್ಧ ಟೀಕಾಪ್ರಹಾರ ನಡೆಸಿದ ಸಂದರ್ಭದಲ್ಲಿ ಅಸಮಾಧಾನಗೊಂಡ ಚಂದ್ರಶೇಖರ್, ದೇವೇಗೌಡರಿಗೆ ಜೈ ಎಂಬ ಘೋಷಣೆ ಕೂಗಿ ಚಪ್ಪಲಿ ಎಸೆಯುವ ಯತ್ನ ನಡೆಸಿದ್ದ.

ಮುಖ್ಯಮಂತ್ರಿಗಳ ಮೇಲೆ ಚಪ್ಪಲಿ ಎಸೆಯುವ ಯತ್ನ ನಡೆಸಿದ ಆರೋಪಿ ಚಂದ್ರಶೇಖರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಆರೋಪಿ ಕೋಡಿಹಳ್ಳಿ ನಿವಾಸಿಯಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ 355, 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾಜ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶೂ ಎಸೆಯುವ ಯತ್ನ ನಡೆಸಿದ್ದ. ಪೊಲೀಸರು ಆತನನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದ್ದರು. ಈ ಘಟನೆಗೂ ಮುನ್ನ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರತ್ತ ಪತ್ರಕರ್ತ ಜರ್ನೈಲ್ ಸಿಂಗ್ ಕೂಡ ಶೂ ಎಸೆದಿದ್ದ. ನಂತರದ ಸರದಿ ಬಿಜೆಪಿ ಪ್ರಚಾರ ಸಭೆಯಲ್ಲಿ ಆಡ್ವಾಣಿ ಅವರತ್ತಲೂ ಚಪ್ಪಲಿ ಆಕಾರದ ವಸ್ತುವನ್ನು ಎಸೆದಿದ್ದ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣ ಹಂಚಿಕೆ-ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ: ದೇವೇಗೌಡ
ರೆಡ್ಡಿ ಸಹೋದರರ ರಾಜೀನಾಮೆಗೆ ಜೆಡಿಎಸ್ ಪಟ್ಟು
ರಾಜ್ಯದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ಜಾತ್ಯತೀತ ಸಮಾಜಕ್ಕೆ ಬಸವ ತತ್ವ ಅಗತ್ಯ: ಠಾಕೂರ್
ಸಂಪುಟ ಪುನರ್ ರಚನೆ ಇಲ್ಲ: ಬಿ.ಎಸ್.ಯಡಿಯೂರಪ್ಪ
ಹಣ ಹಂಚಿಕೆ: ದೇವೇಗೌಡರ ವಿರುದ್ಧ ಬಿಜೆಪಿ ದೂರು