ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೆಚ್ಚಿನ ವಿದ್ಯುತ್‌ಗಾಗಿ ಕೇಂದ್ರಕ್ಕೆ ಮೊರೆ: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೆಚ್ಚಿನ ವಿದ್ಯುತ್‌ಗಾಗಿ ಕೇಂದ್ರಕ್ಕೆ ಮೊರೆ: ಈಶ್ವರಪ್ಪ
ಕೇಂದ್ರ ಸ್ಥಾವರಗಳಿಂದ ರಾಜ್ಯಕ್ಕೆ ಬರುತ್ತಿರುವ ವಿದ್ಯುತ್ ಪಾಲು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಕೇಂದ್ರ ಇಂಧನ ಸಚಿವ ಸುಶೀಲ್ ಕುಮಾರ್ ಶಿಂಧೆ, ಸಚಿವ ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವು ಮುಖಂಡರೊಂದಿಗೆ ಮಾತುಕತೆ ನಡೆಸಿದ ಬಳಿಕ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಕಂಡು ಬಂದಿರುವುದರಿಂದ ಹೆಚ್ಚಿನ ವಿದ್ಯುತ್ ಒದಗಿಸುವಂತೆ ಕೇಂದ್ರವನ್ನು ಕೋರಲಾಗಿದೆ. ವಿಜಾಪುರ ಜಿಲ್ಲೆಯ ಕೂಡಗಿಯಲ್ಲಿ ಎನ್ಟಿಪಿಸಿ ಮೂಲಕ ಸ್ಥಾಪಿಸಲು ಉದ್ದೇಶಿಸಿರುವ ನಾಲ್ಕು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶಾಖೋತ್ಪನ್ನ ಸ್ಥಾವರಕ್ಕೆ ಅಗತ್ಯ ಮಂಜೂರಾತಿ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದರು.

ಅಲ್ಲದೆ, ಕೈಗಾ ಅಣುಶಕ್ತಿ ಸ್ಥಾವರ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಅಲ್ಲಿ ತಲಾ 700 ಮೆಗಾ ವ್ಯಾಟ್ ಸಾಮರ್ಥ್ಯದ ಎರಡು ಘಟಕ ಸ್ಥಾಪನೆಗೆ ಅಗತ್ಯವಾದ ಭೂಮಿ, ನೀರು ಮತ್ತಿತ್ತರ ಸೌಕರ್ಯವನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯ ತದಡಿ ವಿದ್ಯುತ್ ಯೋಜನೆಗೆ ಉಂಟಾಗಿರುವ ಅಡ್ಡಿ ನಿವಾರಣೆಗೆ ಶೀಘ್ರದಲ್ಲೇ ಆ ಭಾಗದ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ನಾವೆಲ್ಲ ಅಣ್ಣ-ತಮ್ಮಂದಿರಂತೆ ಇದ್ದೇವೆ': ಅಶೋಕ್
ಸಾಂತ್ವನ ಹೇಳ್ಲಿಕ್ಕೂ ಬಿಬಿಎಂಪಿಗೆ ಏನು ತೊಂದ್ರೆ: ಲೋಕಾಯುಕ್ತ
ಸಿದ್ದರಾಮಯ್ಯ ನಾಯಕ ಪಟ್ಟ ಹಾದಿ ಸುಗಮ
ಈಶ್ವರಪ್ಪ ಸಚಿವರಾಗಿ ಮುಂದುವರಿಯಲು ಯೋಗ್ಯರಲ್ಲ: ಆರ್.ವಿ.
ಭಿನ್ನಮತ: ರೆಡ್ಡಿ ಬೆಂಬಲಿಗರಿಂದ ರಹಸ್ಯ ಚರ್ಚೆ
ಬೆಂಗಳೂರಿನಲ್ಲಿ ಅಸ್ಸಾಂನ 3 ಉಗ್ರರ ಸೆರೆ