ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ ಧ್ವಜ ಹಾರಿಸಲು ಸರ್ಕಾರ ಅಡ್ಡಗಾಲು: ಕರವೇ ಕಿಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಧ್ವಜ ಹಾರಿಸಲು ಸರ್ಕಾರ ಅಡ್ಡಗಾಲು: ಕರವೇ ಕಿಡಿ
ಸರ್ಕಾರದ ಸುತ್ತೋಲೆ ಹಿಂಪಡೆಯಲು ಆಗ್ರಹ
NRB
ಕನ್ನಡ ರಾಜ್ಯೋತ್ಸವ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಏತನ್ಮಧ್ಯೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಈ ಸುತ್ತೋಲೆಯನ್ನು ಹಿಂತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ನೆಲ, ಜಲ, ಭಾಷೆಗೆ ಒತ್ತು ನೀಡುವುದಾಗಿ ಹೇಳುವ ಸರ್ಕಾರವೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂದು ಸುತ್ತೋಲೆ ಹೊರಡಿಸಿರುವುದು, ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ಎಲ್ಲ ಕನ್ನಡ ಪರ ಸಂಘಟನೆಗಳು ತೀವ್ರವಾಗಿ ವಿರೋಧಿಸುವುದಾಗಿ ಹೇಳಿವೆ.

ಕನ್ನಡಿಗರ ಸ್ವಾಭಿಮಾನ ಸಂಕೇತವಾಗಿರುವ ಕನ್ನಡ ಧ್ವಜ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರಿಸದಂತೆ ಶನಿವಾರ ಕರ್ನಾಟಕ ಸರಕಾರ ಹೊರಡಿಸಿತ್ತು. ಸರಕಾರ ಹೊರಡಿಸಿರುವ ಕನ್ನಡ ವಿರೋಧಿ ಆದೇಶವನ್ನು 24 ಗಂಟೆಯಲ್ಲಿ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರಕಾರವೇ ಹೊಣೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಆದೇಶ ಹಿಂಪಡೆಯದಿದ್ದರೆ ಸರ್ಕಾರ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಟ್ಟೆ ಬಾವುಟ ಪ್ರದರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೊನೆಗೂ ಸಿದ್ದರಾಮಯ್ಯಗೆ ಒಲಿದ 'ವಿಪಕ್ಷ ಗದ್ದುಗೆ'
ಅಸಮಾಧಾನ ಹೊರಹಾಕಿದ್ರೆ ಎಚ್ಚರ: ಡಿ.ವಿ.ಸದಾನಂದ ಗೌಡ
ಬಿಕ್ಕಟ್ಟನ್ನು ಜೇಟ್ಲಿ ಪರಿಹರಿಸುತ್ತಾರೆ: ಈಶ್ವರಪ್ಪ
ಬ್ಲಾಕ್‌ಮೇಲ್ ತಂತ್ರಕ್ಕೆ ಬೆಲೆ ಕೊಡ್ಬೇಡಿ: ಆರ್‌ಎಸ್‌ಎಸ್
'ಜನರಿಗಾಗಿ ಪ್ರಾಣ ಕೊಡಲು ಸಿದ್ದ': ಯಡಿಯೂರಪ್ಪ
ಪ್ರೊ.ಅ.ರಾ.ಮಿತ್ರ-ಬೀಳಗಿ ಸೇರಿ ಐವರಿಗೆ ಅಕಾಡೆಮಿ ಪ್ರಶಸ್ತಿ