ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದ ಅಭಿವೃದ್ಧಿಗೆ ನಾವು ಬದ್ಧ: ವೀರಪ್ಪ ಮೊಯ್ಲಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದ ಅಭಿವೃದ್ಧಿಗೆ ನಾವು ಬದ್ಧ: ವೀರಪ್ಪ ಮೊಯ್ಲಿ
ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ರಾಜ್ಯದ ಐವರೂ ಸಚಿವರು ಕರ್ನಾಟಕದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುವುದಾಗಿ ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ಬೆಂಬಲ ನೀಡಿದ ಮತದಾರರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ನಗರದ ರಾಜನಕುಂಟೆ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಜನರು ಒಟ್ಟಿಗೆ ಸೇರಿ ರಾಜ್ಯಕ್ಕೆ ಆಗಬೇಕಾಗಿರುವ ಕೆಲಸಗಳ ಬಗ್ಗೆ ಸಮಾಲೋಚನೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆಗಳನ್ನು ಹಂತ, ಹಂತವಾಗಿ ಈಡೇರಿಸುವುದಾಗಿ ಆಶ್ವಾಸನೆ ನೀಡಿದರು.

ದೇವನಹಳ್ಳಿಯಲ್ಲಿ ಜುಲೈ 12ರಂದು ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಆಗ ಪ್ರತಿ ಗ್ರಾಮದಿಂದ ಐವರು ಮುಖಂಡರನ್ನು ಆಹ್ವಾನಿಸಿ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಬಳಿಕ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕನ್ನಡ ಧ್ವಜ ಹಾರಿಸಲು ಸರ್ಕಾರ ಅಡ್ಡಗಾಲು: ಕರವೇ ಕಿಡಿ
ಕೊನೆಗೂ ಸಿದ್ದರಾಮಯ್ಯಗೆ ಒಲಿದ 'ವಿಪಕ್ಷ ಗದ್ದುಗೆ'
ಅಸಮಾಧಾನ ಹೊರಹಾಕಿದ್ರೆ ಎಚ್ಚರ: ಡಿ.ವಿ.ಸದಾನಂದ ಗೌಡ
ಬಿಕ್ಕಟ್ಟನ್ನು ಜೇಟ್ಲಿ ಪರಿಹರಿಸುತ್ತಾರೆ: ಈಶ್ವರಪ್ಪ
ಬ್ಲಾಕ್‌ಮೇಲ್ ತಂತ್ರಕ್ಕೆ ಬೆಲೆ ಕೊಡ್ಬೇಡಿ: ಆರ್‌ಎಸ್‌ಎಸ್
'ಜನರಿಗಾಗಿ ಪ್ರಾಣ ಕೊಡಲು ಸಿದ್ದ': ಯಡಿಯೂರಪ್ಪ