| ಕನ್ನಡ ಧ್ವಜ ಹಾರಾಟಕ್ಕೆ ಅಡ್ಡಗಾಲು ಇಲ್ಲ: ಯಡಿಯೂರಪ್ಪ | | ಸುತ್ತೋಲೆ ಹಿಂಪಡೆಯಲು ಸಿಎಂ ಭರವಸೆ | ಬೆಂಗಳೂರು, ಸೋಮವಾರ, 8 ಜೂನ್ 2009( 16:54 IST ) | | | |
| | |
| ಕನ್ನಡ ರಾಜ್ಯೋತ್ಸವ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದೆಂಬ ಸರ್ಕಾರದ ಆದೇಶಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶವನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡುವ ಮೂಲಕ ಕನ್ನಡ ಪರ ಸಂಘಟನೆಗಳ ಬೇಡಿಕೆಗೆ ಜಯ ದೊರೆತಂತಾಗಿದೆ.ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದೆಂಬ ಸುತ್ತೋಲೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಧಾರವಲ್ಲ, ಈ ಹಿಂದಿನ ಸರ್ಕಾರಗಳ ಸುತ್ತೋಲೆಯನ್ನೇ ಜಾರಿ ಮಾಡಲಾಗಿತ್ತು. ಇದೀಗ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಆ ಸುತ್ತೋಲೆಯನ್ನು ಹಿಂಪಡೆಯುವುದಾಗಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.ಕನ್ನಡ ರಾಜ್ಯೋತ್ಸವ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದುಲ್ಲದೇ, 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು.ಕನ್ನಡಿಗರ ಸ್ವಾಭಿಮಾನ ಸಂಕೇತವಾಗಿರುವ ಕನ್ನಡ ಧ್ವಜ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರಿಸದಂತೆ ಶನಿವಾರ ಕರ್ನಾಟಕ ಸರಕಾರ ಹೊರಡಿಸಿತ್ತು. ಸರಕಾರ ಹೊರಡಿಸಿರುವ ಕನ್ನಡ ವಿರೋಧಿ ಆದೇಶವನ್ನು 24 ಗಂಟೆಯಲ್ಲಿ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದರು. ಅಲ್ಲದೇ ಆದೇಶ ಹಿಂಪಡೆಯದಿದ್ದರೆ ಸರ್ಕಾರ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪು ಬಟ್ಟೆ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು. |
| |
| | |
| | | |
|
| | | | | |
|
|
| |
|  | |