| ಸರ್ಕಾರ ಅಸ್ಥಿರಗೊಳಿಸುವ ಸಂಚು ಇಲ್ಲ: ಎಚ್‌ಡಿಕೆ | | | ಬೆಂಗಳೂರು, ಗುರುವಾರ, 11 ಜೂನ್ 2009( 16:50 IST ) | | | |
| | |
| ಆಡಳಿತಾರೂಢ ಬಿಜೆಪಿಯಲ್ಲಿ ತಲೆದೋರಿರುವ ಆಂತರಿಕ ಕಲಹವನ್ನು ದುರುಪಯೋಗಪಡಿಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ದುರುದ್ದೇಶ ಹೊಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸ್ನೇಹಿತರು ದಯವಿಟ್ಟು ಗಮನಿಸಬೇಕು, ಇಂತಹ ಊಹಾಪೋಹಕ್ಕೆ ಹೆಚ್ಚಿನ ಆದ್ಯತೆ ನೀಡಬಾರದು ಎಂದು ಮನವಿ ಮಾಡಿಕೊಂಡರು.ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಲಾಭವನ್ನು ಪಡೆದು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಜತೆ ಜೆಡಿಎಸ್ ಕೈಜೋಡಿಸಿ ಅಧಿಕಾರದ ಗದ್ದುಗೆ ಏರುತ್ತೆ ಎಂಬಂತಹ ಸುದ್ದಿಯಲ್ಲಿ ಹುರುಳಿಲ್ಲ ಎಂದು ಸಮಜಾಯಿಷಿಕೆ ನೀಡಿದರು. ಕಲಹ ಎಲ್ಲ ಪಕ್ಷಗಳಲ್ಲೂ ಇರುತ್ತೇ, ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು ಎಂದೆನ್ನುತ್ತಿದ್ದ ಮುಖಂಡರೇ ತಿರುಗು ಬಿದ್ದಿರುವುದು ಪಕ್ಷದೊಳಗಿನ ಭಿನ್ನಮತಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. |
| |
| | |
| | | |
|
| | |
|
|
| | |
|
|
| |
|  | |