ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾದ್ರೆ ವಿರೋಧ: ಕಾಗೇರಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾದ್ರೆ ವಿರೋಧ: ಕಾಗೇರಿ
ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆಯಾಗುವುದಾದರೆ ರಾಷ್ಟ್ರವ್ಯಾಪಿ ಏಕರೂಪ ಶಿಕ್ಷಣ ಪದ್ಧತಿಯನ್ನು ವಿರೋಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪುನರುಚ್ಚರಿಸಿದ್ದಾರೆ.

ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಪದ್ಧತಿಯ ಕುರಿತಾದ ಸಾಧಕ ಭಾದಕಗಳನ್ನು ಚರ್ಚಿಸಿದ ಬಳಿಕ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಭೌಗೋಳಿಕ, ಸಾಮಾಜಿಕ ಸ್ಥಿತಿಗತಿ ಆಧರಿಸಿ ಏಕರೂಪ ಶಿಕ್ಷಣ ಪದ್ಧತಿ ಜಾರಿಗೆ ತರುವುದು ಸೂಕ್ತ. ಹಾಗೆಯೇ ಇದನ್ನು ಜಾರಿಗೆ ತರುವ ಮುನ್ನ ಪ್ರಾಯೋಗಿಕವಾಗಿ ಚಿಂತನೆ ನಡೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಸಕ್ತ ವರ್ಷ ಸರ್ಕಾರದ ನಿಯಮಾನುಸಾರ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಹಾಗೂ ಹೆಚ್ಚುವರಿ ಶಿಕ್ಷಕರ ನಿಯೋಜನೆ ಮಾಡಲಾಗಿದೆ. ಇದರಲ್ಲಿ ಕಾನೂನು ಉಲ್ಲಂಘಿಸಿ ವರ್ಗಾವಣೆ ಆಗಿದ್ದು ಕಂಡು ಬಂದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ್ಯಾ.ನಾರಿಮನ್ ಬದಲಾವಣೆ ಇಲ್ಲ: ಬೊಮ್ಮಾಯಿ
ಮಳೆಗಾಗಿ 34ಸಾವಿರ ದೇವಸ್ಥಾನಗಳಲ್ಲಿ ಪೂಜೆ: ಸೋಮಣ್ಣ
ಮೈಸೂರು: ಭುಗಿಲೆದ್ದ ಕೋಮುಗಲಭೆಗೆ ಮೂರು ಬಲಿ
ವ್ಯಕ್ತಿ ಪೂಜೆ ಬೇಡ;ಪಕ್ಷ ಪೂಜೆ ಮಾಡಿ: ಡಿಕೆಶಿ
ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು ಮಳೆ
ಲೋಡ್ ಶೆಡ್ಡಿಂಗ್: ಸರ್ಕಾರಕ್ಕೆ ನೋಟಿಸ್