ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕ್ಷಿಪ್ರರಕ್ಷಣಾ ಕಾರ್ಯದಲ್ಲಿ ಸರ್ಕಾರದ ವೈಫಲ್ಯ: ಉಗ್ರಪ್ಪ (Yadyurappa | Flood | rescue | padayatra)
Feedback Print Bookmark and Share
 
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕ್ಷಿಪ್ರವಾಗಿ ಆರಂಭಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬುದಾಗಿ ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ ದೂರಿದ್ದಾರೆ.

ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ರಾಜ್ಯ 15 ಜಿಲ್ಲೆಗಳಲ್ಲಿ 222 ಮಂದಿಯ ಜೀವಹಾನಿಯೊಂದಿಗೆ ದೊಡ್ಡ ಮಟ್ಟದಲ್ಲಿ ಬೆಳೆಗಳ ಧ್ವಂಸ, ಆಸ್ತಿ ಹಾಗೂ ಸಂಪರ್ಕ ವ್ಯವಸ್ಥೆಯ ನಾಶವಾಗಿದೆ ಎಂದು ಅವರು ಆಪಾದಿಸಿದ್ದಾರೆ.

ಐವರು ಸದಸ್ಯತ್ವದ ಕಾಂಗ್ರೆಸ್ ನಾಯಕರ ತಂಡವು ರಾಜ್ಯದ ವಿವಿಧ ಭಾಗಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಿದ ವೇಳೆ ಪರಿಹಾರ ಕಾರ್ಯಗಳು ಹಾಗೂ ಪುನರ್ವಸತಿ ಕಾರ್ಯಗಳು ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಕಂಡಿದ್ದು ಜನತೆಯು ಅತೀವ ಸಂಕಷ್ಟದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾದಯಾತ್ರೆ ತೆರಳುವ ಬದಲಿಗೆ, ಸಂತ್ರಸ್ತರಿಗೆ ಹಣಸಂಗ್ರಹಕ್ಕಾಗಿ ಐಟಿಬಿಟಿ ಸೇರಿದಂತೆ ಉದ್ಯಮಿಗಳ ಸಭೆಯನ್ನು ಕರೆಯಬೇಕು ಎಂದು ಅವರು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ