ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರವಾಹದಿಂದ 11.34 ಲಕ್ಷ ಹೆಕ್ಟೇರ್ ಬೆಳೆ ಹಾನಿ: ರವೀಂದ್ರನಾಥ್ (Flood | Crop | Agriculture | Ravindra Nath)
Feedback Print Bookmark and Share
 
ಕಳೆದ ವಾರ ಉತ್ತರ ಕರ್ನಾಟಕ ಹಾಗೂ ಇತರ ಹಲವು ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹರಿದ ಪ್ರವಾಹದಿಂದಾಗಿ 11.34 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಸಂಪೂರ್ಣ ಬೆಳೆ ಹಾನಿ ಸಂಭವಿಸಿದೆ ಎಂದು ಕೃಷಿ ಸಚಿವ ಎಸ್.ಎ.ರವೀಂದ್ರನಾಥ್ ತಿಳಿಸಿದರು.

ಅವರು ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು, "8.37 ಲಕ್ಷ ಹೆಕ್ಟೇರ್ನಲ್ಲಿ ಬೆಳೆದು ನಿಂತಿದ್ದ ಮುಂಗಾರು ಬೆಳೆ ಪ್ರವಾಹದಿಂದ ಹಾನಿಗೀಡಾಗಿದೆ. 2.97 ಲಕ್ಷ ಹೆಕ್ಟೇರ್ ಪ್ರದೇಶದ ಹಿಂಗಾರು ಬಿತ್ತನೆಯೂ ಕೊಚ್ಚಿಕೊಂಡು ಹೋಗಿದೆ" ಎಂದು ಸಚಿವರು ತಿಳಿಸಿದರು. ಪ್ರವಾಹದಿಂದ ಒಟ್ಟಾರೆ ರೂ 2,500 ಕೋಟಿ ಮೌಲ್ಯದ ಬೆಳೆ ನಷ್ಟ ಸಂಭವಿಸಿದೆ ಎಂಬುದು ಪ್ರಾಥಮಿಕ ಅಂದಾಜಿನ ಮೂಲಕ ತಿಳಿದುಬಂದಿದೆ. ಈ ಮೊತ್ತ ಏರಿಕೆಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.

ವಿಜಾಪುರ ಜಿಲ್ಲೆಯಲ್ಲಿ ಅತ್ಯಧಿಕ 3,72,642 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ. ಬೆಳಗಾವಿ ಜಿಲ್ಲೆಯ ವಿವಿಧೆಡೆ 1.81 ಲಕ್ಷ ಹೆಕ್ಟೇರ್‌ನಲ್ಲಿ ವಿವಿಧ ಬೆಳೆಗಳು ಕೊಚ್ಚಿ ಹೋಗಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಕಡಿಮೆ 1,019 ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಾಶವಾಗಿದೆ ಎಂದು ಹೇಳಿದರು.

ತೊಗರಿ, ಸೂರ್ಯಕಾಂತಿ, ನೆಲಕಡಲೆ, ಸಜ್ಜೆ, ಕಬ್ಬು, ಜೋಳ, ಕಡಲೆ, ಬತ್ತ ಮತ್ತಿತರ ಬೆಳೆಗಳು ನಾಶವಾಗಿವೆ. ಕೆಲವು ಜಿಲ್ಲೆಗಳಲ್ಲಿ ಕಟಾವಿಗೆ ಸಿದ್ಧವಾಗಿದ್ದ ಬೆಳೆಗಳು ಸಂಪೂರ್ಣ ಜಲಾವೃತವಾಗಿ ಸರ್ವನಾಶವಾಗಿದೆ. ನಿಖರವಾದ ವರದಿ ಸಿದ್ಧಪಡಿಸಲು ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ರವೀಂದ್ರನಾಥ್ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ