ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಂಕಿತ ಉಗ್ರ ಅಸಿಫ್ ಎಂಬಿಬಿಎಸ್ ಪರೀಕ್ಷೆ ಬರೆಯಲಿ: ಕೋರ್ಟ್ (Terrorist | MBBS | Mohammad Asif | SIMI | Hubli)
Feedback Print Bookmark and Share
 
ಬಂಧಿತನಾಗಿರುವ ಶಂಕಿತ ಭಯೋತ್ಪಾದಕನಿಗೆ ಕಿಮ್ಸ್ (ಕರ್ನಾಟಕ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಕಾಲೇಜಿನಲ್ಲಿ ಎಂಬಿಬಿಎಸ್ ಪರೀಕ್ಷೆ ಬರೆಯಲು ಸ್ಥಳೀಯ ನ್ಯಾಯಾಲಯ ಅನುಮತಿ ನೀಡಿದೆ.

ಕಳೆದ ವರ್ಷ ಬಂಧಿತನಾಗಿರುವ ಶಂಕಿತ ಉಗ್ರ ಮೊಹಮ್ಮದ್ ಅಸಿಫ್ ಕಿಮ್ಸ್‌ನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ನಿಷೇಧಿತ ಸಿಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪ ಮೇಲೆ ಅಸಿಫ್‌ನನ್ನು ಕಳೆದ ವರ್ಷ ಪೊಲೀಸರು ಬಂಧಿಸಿದ್ದರು. ಆದರೆ ವಿದ್ಯಾರ್ಥಿಯಾಗಿರುವ ಅಸಿಫ್‌ಗೆ ದ್ವಿತೀಯ ವರ್ಷದ ಎಂಬಿಬಿಎಸ್ ಪರೀಕ್ಷೆ ಬರೆಯಲು ನ್ಯಾಯಾಲಯ ಅನುಮತಿ ನೀಡಬೇಕೆಂದು ವಕೀಲರು ಮನವಿ ಮಾಡಿಕೊಂಡಿದ್ದರು.

ಕೋರ್ಟ್ ಆದೇಶದ ಮೇರೆಗೆ ಗುರುವಾರ ಪೊಲೀಸರು ಅಸಿಫ್‌ನನ್ನು ಕಿಮ್ಸ್‌ಗೆ ಕರೆತಂದು, ಕಾಲೇಜಿನ ಆಡಳಿತ ನಿರ್ದೇಶಕರ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಆದೇಶದ ಮೇರೆಗೆ ಆತನ ದಾಖಲಾತಿಗಳನ್ನು ಪರಿಶೀಲಿಸಿದ ನಿರ್ದೇಶಕರು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ