ರಾಜ್ಯ ಬಿಜೆಪಿ ಸರ್ಕಾರದ ಸಣ್ಣತನದ ರಾಜಕಾರಣದಿಂದಾಗಿ ಕಳೆದ ಒಂದುವರೆ ವರ್ಷಗಳಿಂದ ಜಿಲ್ಲಾಭಿವೃದ್ಧಿ ಗೌಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಮನಗರ ನಗರಸಭೆಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುದಾನ ಬಿಡುಗಡೆ ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದರು.
ಜಿಲ್ಲಾ ಕೇಂದ್ರವಾಗಿ ಎರಡು ವರ್ಷಗಳು ಪೂರೈಸಿದ್ದರು ಸಹ ಈವರೆಗೆ ಕನಿಷ್ಠ ಜಿಲ್ಲಾ ಮಟ್ಟದ ಕಚೇರಿಗಳ ಕಾರ್ಯನಿರ್ವಹಣೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರ ನಿರ್ಲಕ್ಷ್ಯವಹಿಸಿದೆ ಎಂದು ಟೀಕಿಸಿದರು.