ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನ.3ರಂದು ಸಾಮೂಹಿಕ ರಾಜೀನಾಮೆ: ವೈದ್ಯರ ಎಚ್ಚರಿಕೆ (BJP | Govt Doctor | Yeddyurappa | Karnataka | Sri Ramulu)
Feedback Print Bookmark and Share
 
ನವೆಂಬರ್ 2ರೊಳಗೆ ಸರ್ಕಾರ ವೈದ್ಯರ ಬೇಡಿಕೆ ಈಡೇರಿಸದಿದ್ದರೆ ನ.3ರಂದು ಸಾಮೂಹಿಕ ರಾಜೀನಾಮೆ ನೀಡುವುದಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ನಗರದಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಾನವೀಯತೆ ನೆಲೆಯಲ್ಲಿ ನೆರೆ ಸಂತ್ರಸ್ಥರ ಸಂಘದ ಬಹುತೇಕ ವೈದ್ಯರು ಆರೋಗ್ಯ ಸೇವೆ ಒದಗಿಸಿದ್ದಾರೆ. ಸರ್ಕಾರ ಈಗ ನೆರೆ ನೆಪವಾಗಿಟ್ಟುಕೊಂಡು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ನಮ್ಮ ನಿಲುವುಗಳನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ನ.3ರಂದು ಬೆಳಿಗ್ಗೆ ಆನಂದರಾವ್ ವೃತ್ತದಲ್ಲಿರುವ ಆರೋಗ್ಯ ಇಲಾಖೆ ಆಯುಕ್ತರ ಕಚೇರಿಗೆ ತೆರಳಿ ಸಾಮೂಹಿಕ ರಾಜೀನಾಮೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಎಚ್.ಎಸ್.ರವೀಂದ್ರ ಹೇಳಿದ್ದಾರೆ.

ಅಕ್ಟೋಬರ್ 27ರಂದು ಸಂಜೆ 4ಗಂಟೆಗೆ ಬೇಡಿಕೆಗಳ ಬಗ್ಗೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಭೆ ಕರೆದಿದ್ದಾರೆ. ಅ.28ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ