ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ವಿರುದ್ಧ ದೂರು (KMF | Soma shekar Reddy | Bangalore | Police | BJP)
Feedback Print Bookmark and Share
 
ವ್ಯಕ್ತಿಯೊಬ್ಬರನ್ನು ವಾಹನದಲ್ಲಿ ಅಪಹರಿಸಿ ಪ್ರಾಣ ಬೆದರಿಕೆ ಒಡ್ಡಿದ ಆರೋಪದ ಮೇಲೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಹಾಗೂ ಇತರರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಜಿಪಿಆರ್‌ವಿ ಕಂಪೆನಿಯ ವ್ಯವಸ್ಥಾಪಕ ಪ್ರಶಾಂತ್ ಶೆಟ್ಟಿ ಎನ್ನುವವರನ್ನು ಅಪಹರಿಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಸೋಮಶೇಖರ ರೆಡ್ಡಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸೀತಾರಾಂ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅ.24ರಂದು ಹಾಡಹಗಲೇ ಈ ಅಪಹರಣ ಪ್ರಕರಣ ನಡೆದಿದ್ದು ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಭಾನುವಾರ ರಾತ್ರಿ ಮೊಕದ್ದಮೆ ದಾಖಲಾಗಿದೆ.

ಕೋಟ್ಯಂತರ ರೂ.ಗಳ ರಾಯಚೂರು ಥರ್ಮಲ್ ಫವರ್ ಟೆಂಡರ್ ವಿಚಾರದ ಪೈಪೋಟಿಯಲ್ಲಿ ಈ ಅಪಹರಣ ಮತ್ತು ಬೆದರಿಕೆ ಪ್ರಕರಣ ನಡೆದಿತ್ತು. ಸುದರ್ಶನ್ ಕಾಂಪ್ಲೆಕ್ಸ್ 1ನೇ ಮಹಡಿಯಿಂದ ಪ್ರಶಾಂತ್ ಶೆಟ್ಟಿ ಅವರನ್ನು ಎರಡು ಕ್ವಾಲೀಸ್ ವಾಹನದಲ್ಲಿ ಅಪಹರಣ ಮಾಡಿದ ರೆಡ್ಡಿ ಅವರ ಕಡೆಯ ಮ್ಯಾನೇಜರ್ ಮಾದೇಗೌಡ ಮತ್ತು 20ಜನರ ತಂಡ ಪ್ರಶಾಂತ್ ಶೆಟ್ಟಿ ಅವರನ್ನು ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಂದಾಯ ಸಚಿವ ಕರುಣಾಕರ ರೆಡ್ಡಿ ಅವರ ಮನೆಗೆ ಬಲವಂತವಾಗಿ ಕರೆದುಕೊಂಡು ಹೋಗಿದ್ದರು.

ಕರುಣಾಕರ ರೆಡ್ಡಿ ನಿವಾಸದಲ್ಲಿದ್ದ ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಅವರ ಮುಂದೆ ಹಾಜರುಪಡಿಸಿದಾಗ ರೆಡ್ಡಿ ಅವರು, ಟೆಂಡರ್‌ಗೆ ಅರ್ಜಿ ಸಲ್ಲಿಸಬೇಡ. ಅರ್ಜಿ ಸಲ್ಲಿಸಿದರೆ ಪರಿಣಾಮ ಎದುರಿಸಬೇಕಾದೀತು ಎಂದು ಜೀವ ಬೆದರಿಕೆ ಹಾಕಿ ಕಳಿಸಿದ್ದರು ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ