ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮನೆ ಕಟ್ಟಿಸಿ ಕೊಡುತ್ತೇವೆ:ಸರ್ಕಾರಕ್ಕೆ ರೆಡ್ಡಿ ಸವಾಲ್ (Yeddyurappa | Janaradana Reddy | BJP | Karunakara Reddy)
Feedback Print Bookmark and Share
 
ನೆರೆಯಲ್ಲಿ ನೊಂದವರಿಗೆ 500ಕೋಟಿ ರೂಪಾಯಿ ವೆಚ್ಚದಲ್ಲಿ 50ಸಾವಿರ ಮನೆಗಳನ್ನು ನಿರ್ಮಿಸಿಕೊಡುವ ಬೃಹತ್ ಯೋಜನೆಗೆ ಬುಧವಾರ ಚಾಲನೆ ನೀಡಲಾಗುವುದು ಎಂದು ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬರಲಿ, ಬಾರದಿರಲಿ ಕಂದಾಯ ಸಚಿವ ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಮುಖ್ಯಮಂತ್ರಿಗಳನ್ನು ದೂರವಿಟ್ಟು ಸರ್ಕಾರಕ್ಕೆ ಪರ್ಯಾಯವಾಗಿ ಮನೆ ನಿರ್ಮಿಸುತ್ತಿರುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕರುಣಾಕರ ರೆಡ್ಡಿ ಅವರು ಸರ್ಕಾರದ ಭಾಗವಾಗಿದ್ದು, ಅವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು ಎಂದರು.

ನಿಮ್ಮಿಂದ ಸರ್ಕಾರಕ್ಕೆ ಬೆದರಿಕೆ ಇದೆಯಲ್ಲಾ?ಎಂದು ಕೇಳಿದ ಪ್ರಶ್ನೆಗೆ ಹಾಗೇಕೆ ನೀವು ಅಂದುಕೊಳ್ಳುವಿರಿ?ಎಂದು ಮರುಪ್ರಶ್ನೆ ಹಾಕಿ ಜಾರಿಕೊಂಡರು.

ಚಿದು,ದೇವೇಗೌಡ,ಕಲಾಂಗೆ ಆಹ್ವಾನ: ನೆರೆಯಲ್ಲಿ ನೊಂದವರಿಗೆ ಮನೆ ನಿರ್ಮಿಸಿಕೊಡುವ ಯೋಜನೆಗಳ ಚಾಲನೆಯ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ ಕಲಾಂ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ನವೆಂಬರ್ 2ರಂದು ರಾಯಚೂರಿನಲ್ಲಿ ನಡೆಯುವ ಸಮಾರಂಭಕ್ಕೆ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

ಒಂದೆರೆಡು ದಿನಗಳಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿ ಕೈಗೊಳ್ಳುವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ