ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ಕುರ್ಚಿ ಬಿಟ್ಟು ತೊಲಗಿ ಎಂದರೂ ಹೋಗುತ್ತಿಲ್ಲ: ಸಿದ್ದರಾಮಯ್ಯ (BJP | Siddaramaiah | Congress | Yeddyurappa | JDS)
Feedback Print Bookmark and Share
 
NRB
'ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ 8ಗಂಟೆ ಕಾಲವೂ ವಿದ್ಯುತ್ ಕೊಡಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕುರ್ಚಿ ಬಿಟ್ಟು ತೊಲಗಿ ಎಂದರೂ ಹೋಗುತ್ತಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಕಿಡಿಕಾರಿದ್ದಾರೆ.

ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಆಶ್ರಯದಲ್ಲಿ ನಡೆದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆ ಪಂಚಾಯತ್‌ರಾಜ್ ಹಾಗೂ ಪೌರಸಂಸ್ಥೆ ಸದಸ್ಯರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಜಲಾಶಯಗಳು ತುಂಬಿವೆ. ಉತ್ತರ ಕರ್ನಾಟಕದ 15ಜಿಲ್ಲೆಗಳು ನೆರೆಯಿಂದ ತತ್ತರಿಸಿದ್ದು ಕೃಷಿ ಪಂಪ್‌ಸೆಟ್‌ಗಳು ಕೆಲಸ ನಿರ್ವಹಿಸುತ್ತಿಲ್ಲ. ಟ್ರಾನ್ಸ್‌ಫಾರ್ಮರ್‌ಗಳು ಕೆಟ್ಟು ನಿಂತಿವೆ. ಇದರಿಂದಾಗಿ ವಿದ್ಯುತ್ ಬಳಕೆ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೂ ಸರಿಯಾಗಿ ವಿದ್ಯುತ್ ವಿತರಣೆ ಮಾಡಲಾಗುತ್ತಿಲ್ಲ. ವಿದ್ಯುತ್ ಇಲಾಖೆ ಕುಲಗೆಟ್ಟು ಹೋಗಿದೆ. ಇಂತಹ ಆಡಳಿತ ದೋಷದ ವಿಚಾರಗಳನ್ನು ಹೇಳಿದರೆ ಹೊಟ್ಟೆಕಿಚ್ಚು ಎನ್ನುತ್ತಾರೆ. ನಾನೇನು ಮುಖ್ಯಮಂತ್ರಿ ಕುರ್ಚಿ ಕಿತ್ತುಕೊಳ್ಳಲು ಹೋಗಿಲ್ಲ. ತಪ್ಪು ತೋರಿಸುವುದು ಬಿಜೆಪಿಗೆ ಸರಿ ಕಾಣುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚು ಹಣ ಖರ್ಚು ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ಬಿಜೆಪಿ ಸರ್ಕಾರ ಅಸಡ್ಡೆ ತೋರುತ್ತಿದೆ. ಯೋಜನೆ ಯಶಸ್ವಿಯಾದರೆ ಕಾಂಗ್ರೆಸ್, ಕೇಂದ್ರ ಸರ್ಕಾರ, ಸೋನಿಯಾಗಾಂಧಿಗೆ ಹೆಸರು ಬರುತ್ತದೆಂದು ಜಾರಿ ಮಾಡುತ್ತಿಲ್ಲ. ಯಡಿಯೂರಪ್ಪ ಸರ್ಕಾರಕ್ಕೆ ಗ್ರಾಮೀಣ ಜನರ ಬಗ್ಗೆ ಬದ್ಧತೆ ಇಲ್ಲವಾಗಿದೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ