ಕರ್ನಾಟಕ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಶೀಘ್ರದಲ್ಲಿ ಶಮನವಾಗಲಿದೆ. ಆದರೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿಎಂ ಸೀಟು ಭದ್ರವಾಗಿಯೇ ಇರುತ್ತೆ ಎಂದು ಬಿಜೆಪಿ ವಕ್ತಾರ ಮುಕ್ತಾರ್ ಅಬ್ಬಾಸ್ ನಕ್ವಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಬಿಕ್ಕಟ್ಟು ಶೀಘ್ರವೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು,ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.
ಏತನ್ಮಧ್ಯೆ ಪ್ರಸಕ್ತ ವಿದ್ಯಮಾನದ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ , ವಕ್ತಾರ ಸಿ.ಟಿ.ರವಿ, ಶಾಸಕರಾದ ಆನೇಕಲ್ ನಾರಾಯಣ ಸ್ವಾಮಿ, ರಾಮದಾಸ್ ಮತ್ತು ಎಸ್.ರಘು ಅವರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿದೆ.
ಭಿನ್ನಮತ ಶಮನಗೊಳಿಸುವ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗುವುದು. ಸರ್ಕಾರಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸುಷ್ಮಾ ಸ್ವರಾಜ್ ಅವರೊಂದಿಗೆ ಜನಾರ್ದನ ರೆಡ್ಡಿ ಇಂದು ನಡೆಸಿದ ಮಾತುಕತೆ ವಿಫಲವಾಗಿದ್ದು,ನಾಯಕತ್ವ ಬದಲಾಗಲೇಬೇಕು ಎಂಬ ಪಟ್ಟು ರೆಡ್ಡಿ ಪಾಳಯ ಸಡಿಲಿಸದ ಪರಿಣಾಮ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ.