ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೆರೆ ಸಂತ್ರಸ್ತರು ಭಯ ಪಡಬೇಕಾಗಿಲ್ಲ: ಯಡಿಯೂರಪ್ಪ (Yeddyurappa | Belagavi | BJP | Congress | KPCC)
Feedback Print Bookmark and Share
 
NRB
ಪ್ರವಾಹದಿಂದ ಹಾನಿಗೊಳಗಾಗಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಶಾಲೆ, ಕಾಲೇಜುಗಳನ್ನು ಸಹ ಪ್ರಾರಂಭಿಸಲಾಗುವುದು ಎಂದರು.

ಸಂತ್ರಸ್ತರ ಜನರ ಸಂಕಷ್ಟಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನವಗ್ರಾಮಗಳಲ್ಲಿ ಮನೆಗಳನ್ನು ನಿರ್ಮಿಸಲು ರಾಜ್ಯದಲ್ಲಿರುವ ವಿವಿಧ ಮಠಾಧೀಶರು ಹಾಗೂ ಉದ್ದಿಮೆದಾರರು ಹೆಚ್ಚಿನ ಸಹಾಯ ಹಾಗೂ ಸಹಕಾರವನ್ನು ನೀಡುತ್ತಿದ್ದು, ಸಂತ್ರಸ್ತರು ಯಾವುದೇ ಭಯ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ