ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿ-ಸಿಬಿಐ ತನಿಖೆ ಅನಗತ್ಯ: ಯಡಿಯೂರಪ್ಪ (BJP | Yeddyurappa | CBI | Karnataka | Andhra pradesh)
Feedback Print Bookmark and Share
 
ಆಂಧ್ರದ ಓಬಳಾಪುರಂನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಸಿಬಿಐ ತನಿಖೆ ನಡೆಸುವುದು ಅನಾವಶ್ಯಕ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿಯಲ್ಲಿ ಶುಕ್ರವಾರ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸುವ ಆಸರೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಮುನ್ನ ತಿಂಥಣಿ ಮೌನೇಶ್ವರ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಂಧ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಸಿಬಿಐ ತನಿಖೆ ನಡೆಸಲು ಆಂಧ್ರ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದಾಗ ಮುಖ್ಯಮಂತ್ರಿಗಳು ಗಣಿಗಾರಿಕೆಯ ಬಗ್ಗೆ ಸಿಬಿಐ ತನಿಖೆ ನಡೆಸುವುದು ಅನಾವಶ್ಯಕ ಮತ್ತು ಅನಗತ್ಯ ಎಂದರು.

ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಅಗತ್ಯ ನೆರವು ಕಲ್ಪಿಸಲು ಕೇಂದ್ರ ಸರ್ಕಾರ ಇದುವರೆಗೆ 660ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಉಳಿದ ಹಣ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸ ಇರುವುದಾಗಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ