ಮಂಡ್ಯ ಜಿಲ್ಲೆಯ ವಡ್ಡರಹಳ್ಳಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಗುತ್ತಿಗೆಯನ್ನು ರಾಜ್ಯ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.ಜಿಲ್ಲೆಯ ಪಾಂಡವಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ 23ಎಕರೆ ಜಮೀನಿನಲ್ಲಿ ಕಲ್ಲು ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿದ್ದನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಗೋಪಾಲಗೌಡ ಮತ್ತು ನ್ಯಾಯಮೂರ್ತಿ ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ ಗಣಿಗಾರಿಕೆ ಗುತ್ತಿಗೆಯನ್ನು ರದ್ದುಗೊಳಿಸಿತು.
ಜಿಲ್ಲೆಯ ಸುಮಾರು 20ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಕುರಿತು ತನಿಖೆ ನಡೆಸಿ ಸಮಗ್ರ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದರು.
ಗಣಿಗಾರಿಕೆಯಿಂದ ಮನೆಗಳು ಕುಸಿಯುತ್ತಿದ್ದು, ಜಮೀನುಗಳು ನಾಶವಾಗುತ್ತದೆ ಎಂದು ವೆಂಕಟೇಶ್ ಗೌಡ ಇನ್ನಿತರು ಅರ್ಜಿ ಸಲ್ಲಿಸಿದರು. ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ವಾದ ಮಂಡಿಸಿದರು.