ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ನೈತಿಕತೆ ಕಳೆದುಕೊಂಡಿದ್ದಾರೆ: ಎಚ್‌ಡಿಕೆ (BJP | Kumaraswamy | JDS | Yeddyurappa | Karnataka)
Feedback Print Bookmark and Share
 
ಬಳ್ಳಾರಿಯ ರೆಡ್ಡಿ ಸಹೋದರರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ಕುರಿತು ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಭಾರಿ ಪ್ರಮಾಣದ ವಿದ್ಯುತ್ ಲೋಡ್‌ಶೆಡ್ಡಿಂಗ್ ಜಾರಿಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ವತಿಯಿಂದ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯ ಸರ್ಕಾರ ಜಾಣ ಮೌನ ವಹಿಸಿದೆ ಎಂದು ದೂರಿದರು.

ಆಂಧ್ರಪ್ರದೇಶ ಸರ್ಕಾರ ಗಣಿ ಮಾಫಿಯಾದ ವಿರುದ್ಧ ಕಠಿಣ ನಿಲುವು ತಾಳಿದೆ. ಅಂತಹ ನಿರ್ಧಾರವನ್ನು ನಮ್ಮ ಸರ್ಕಾರವೂ ಕೈಗೊಂಡರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಅದಿರು ಕಳ್ಳಸಾಗಣೆ ತಪ್ಪಿಸಲು ಸಾಧ್ಯ. ಆದರೆ, ರೆಡ್ಡಿ ಸಹೋದರರ ಹಿಡಿತದಲ್ಲಿರುವ ಯಡಿಯೂರಪ್ಪ ಅವರಿಂದ ಇಂತಹ ತೀರ್ಮಾನವನ್ನು ನಿರೀಕ್ಷಿಸುವುದು ಅಸಾಧ್ಯ ಎಂದರು.

ರಾಜ್ಯದ ಕೆಲವೆಡೆ ನಿತ್ಯವೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ವಂಚನೆಯಾಗುತ್ತಿದೆ. ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಈ ಕುರಿತು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ವರದಿಯನ್ನು ಆಧರಿಸಿ ಕರ್ನಾಟಕದಲ್ಲೂ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ