ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಧಾನಪರಿಷತ್ ಚುನಾವಣೆ:ಇಂದು ಬಹಿರಂಗ ಪ್ರಚಾರ ಅಂತ್ಯ (Vidhana parishath | Election | BJP | Congress | JDS)
Bookmark and Share Feedback Print
 
ತೀವ್ರ ಕುತೂಲಹಕ್ಕೆ ಎಡೆ ಮಾಡಿಕೊಟ್ಟಿರುವ ರಾಜ್ಯ ವಿಧಾನಪರಿಷತ್ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬೀಳಲಿದೆ.

ಡಿಸೆಂಬರ್ 16ರ ಡಿ.ಸಂಜೆ ನಾಲ್ಕು ಗಂಟೆಯ ನಂತರ ಯಾವುದೇ ವ್ಯಕ್ತಿ ಅಥವಾ ಪಕ್ಷ ವಿಧಾನ ಪರಿಷತ್ ಚುನಾವಣೆಗೆ ಬಹಿರಂಗ ಪ್ರಚಾರ ಮಾಡಿದಲ್ಲಿ ಎರಡು ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಬ.ವಿ.ಕುಲಕರ್ಣಿ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಡಿಸೆಂಬರ್ 18ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಪ್ರಜಾ ಪ್ರಾತಿನಿದ್ಯ ಕಾಯ್ದೆ ಪ್ರಕಾರ ಚುನಾವಣೆ ಮುಕ್ತಾಯವಾಗುವ ಸಮಯಕ್ಕಿಂತ 48 ಗಂಟೆ ಮೊದಲು ಯಾವುದೇ ರೀತಿಯ ಬಹಿರಂಗ ಚುನಾವಣಾ ಪ್ರಚಾರ ಮಾಡುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ 20ಜಿಲ್ಲೆಗಳ 25ವಿಧಾನಪರಿಷತ್ ಕ್ಷೇತ್ರಗಳಿಗೆ ಡಿ.18ರಂದು ಚುನಾವಣೆ ನಡೆಯಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್‌ನ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 23ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಸಂಬಂಧಿತ ಮಾಹಿತಿ ಹುಡುಕಿ