ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಸಾಥ್ ನೀಡುತ್ತದೆ ಎಂದು ತಾವು ಹೇಳಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೊತೆ ರಾಜಕೀಯ ಹೊಂದಾಣಿಕೆ ಏರ್ಪಟ್ಟು ಸಿಎಂ ಯಾರಾಗಬೇಕೆಂಬ ಬಗ್ಗೆ ಕಾಂಗ್ರೆಸ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದೆ ಎಂದು ಇದೀಗ ಗೌಡರು ತಮ್ಮ ಮಾತಿನ ವರಸೆಯನ್ನು ಬದಲಾಯಿಸಿದ್ದಾರೆ.
ತುಮಕೂರಿಗೆ ಮಂಗಳವಾರ ಗೌಡರು ಭೇಟಿ ನೀಡಿದ್ದ ವೇಳೆಯಲ್ಲಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಆದ್ರೆ ನನ್ನ ಅಭ್ಯಂತರ ಏನೂ ಇಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು.
ಆದರೆ ತಮ್ಮ ಹೇಳಿಕೆಗೆ ಬಗ್ಗೆ ಸ್ಪಷ್ಟನೆ ನೀಡಿರುವ ಗೌಡರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸಿನ ಯಾವುದೇ ಅಭ್ಯರ್ಥಿಯ ಬಗ್ಗೆ ಕಾಂಗ್ರೆಸ್ ಪಕ್ಷ ತೀರ್ಮಾನವನ್ನು ತೆಗೆದುಕೊಳ್ಳಲು ತಮ್ಮ ಅಭ್ಯಂತರವಿಲ್ಲ ಎಂದು ತುಮಕೂರಿನಲ್ಲಿ ಹೇಳಿದ್ದೆ. ಅಂತಹ ಪ್ರಶ್ನೆ ಈಗ ಅಪ್ರಸ್ತುತ ಎಂದೂ ಸಹ ಹೇಳಿದ್ದೆ ಎಂದಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆಯಲ್ಲಿ ನನ್ನ ಪಾತ್ರವೇನೂ ಇಲ್ಲ. ಪುತ್ರ ಕುಮಾರಸ್ವಾಮಿ ತೆಗೆದುಕೊಂಡ ತೀರ್ಮಾನವನ್ನು ಬೆಂಬಲಿಸಿದ್ದೇನೆ ಅಷ್ಟೇ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.