ರಾಜ್ಯದ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಸರ್ಕಾರ ಎಲ್ಲಾ ರೀತಿಯಲ್ಲೂ ವಿಫಲವಾಗಿದ್ದು, ಈ ಸರ್ಕಾರದ ದುರಾಡಳಿತವನ್ನು ಅಂತ್ಯಗೊಳಿಸಲು ರಾಜ್ಯಪಾಲರು ಸಂವಿಧಾನಬದ್ಧ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಒತ್ತಾಯಿಸಿದ್ದಾರೆ.
ರಾಜ್ಯಪಾಲರು ಸೇರಿದಂತೆ ಸರ್ಕಾರದ ಆಡಳಿತದ ಬಗ್ಗೆ ಎಲ್ಲರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇಂತಹ ಸರ್ಕಾರ ಅಧಿಕಾರದಲ್ಲಿ ಇರಬಾರದು ತಮ್ಮ ನಿವಾಸದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನೆರೆ ಪರಿಪಾರ ಕಾರ್ಯ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಸರ್ಕಾರ ಸಂಪೂರ್ಣ ಹಿನ್ನೆಡೆ ಹೊಂದಿದೆ. ಜೊತೆಗೆ ಭ್ರಷ್ಟಾಚಾರ ಹಾಗೂ ಜಾತಿಯತೆ ಮಿತಿಮೀರಿದೆ. ಇಂತಹ ಕೊಳಕು ಮಟ್ಟದ ಆಡಳಿತ ಹಿಂದೆಂದೂ ನೋಡಿಲ್ಲ ಎಂದು ಕಿಡಿಕಾರಿದರು.
ಸರ್ಕಾರ ತನ್ನ ಆಂತರಿಕ ಕಚ್ಚಾಟದಿಂದ ಪತನಗೊಂಡರೆ ಬಿಜೆಪಿ ಹೊರತುಪಡಿಸಿ ಎಲ್ಲಾ ಜಾತ್ಯತೀತ ಪಕ್ಷಗಳು ಒಂದಾಗಿ ಪರ್ಯಾಯ ಸರ್ಕಾರ ರಚಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ವಿಧಾನಪರಿಷತ್ ಚುನಾವಣೆಯಲ್ಲಿಯೂ ಮತದಾರರನ್ನು ಹಣ ಕೊಟ್ಟು ಖರೀದಿಸುತ್ತಿರುವ ಬಿಜೆಪಿ ವರ್ತನೆಯನ್ನು ಖಂಡಿಸಿದ ಅವರು, ಎಲ್ಲಾ ಚುನಾವಣೆಯಲ್ಲೂ ಬಿಜೆಪಿ ಹಣ ಖರ್ಚು ಮಾಡಿ ಗೆಲ್ಲಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.