ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಡಿಕೆಶಿ ಮೊದ್ಲು ರಾಜೀನಾಮೆ ನೀಡ್ಲಿ: ತೇಜಸ್ವಿನಿ ಕಿಡಿ (Shiv kumar | Thejaswini | Congress | JDS)
Bookmark and Share Feedback Print
 
NRB
ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುತ್ತಿದ್ದರೆ, ಮತ್ತೊಂದೆಡೆ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಮೈತ್ರಿಯನ್ನು ಧಿಕ್ಕರಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ಕಾರಣವಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಂಸದೆ ತೇಜಸ್ವಿನಿ ವಾಗ್ದಾಳಿ ನಡೆಸಿದ್ದಾರೆ.

ಮೇಲ್ಮನೆ ಚುನಾವಣೆ ಫಲಿತಾಂಶದ ಕುರಿತು ಸೋಮವಾರ ಟಿವಿ9 ವಾಹಿನಿಯ ಚರ್ಚೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿನಿ ಅವರು, ಮೇಲ್ಮನೆ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಸಹ, ಡಿಕೆಶಿ ಅವರು ವೈಯಕ್ತಿಕ ಪ್ರತಿಷ್ಠೆಯಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿಯನ್ನು ವಿರೋಧಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಪರಾಜಯಗೊಂಡಿದ್ದು, ಜೆಡಿಎಸ್‌ನ ಇ.ಕೃಷ್ಣಪ್ಪ ಜಯಭೇರಿ ಬಾರಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಸೋಲನ್ನನುಭವಿಸುವ ಮೂಲಕ ಪಕ್ಷ ಮುಖಭಂಗ ಅನುಭವಿಸಿದೆ ಎಂದು ತೇಜಸ್ವಿನಿ ನೇರವಾಗಿ ಆರೋಪಿಸಿದ್ದಾರೆ.

ಪಕ್ಷದ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವುದು ಚುನಾವಣೆಯಲ್ಲಿ ಸ್ಪರ್ಧಿಸುವ ಮುಖಂಡರನ್ನು ಸೋಲಿಸಲು ಅಲ್ಲ ಎಂದು ಹರಿಹಾಯ್ದಿರುವ ಅವರು, ಡಿಕೆಶಿ ಪಕ್ಷದ ಹಲವರ ಸೋಲಿಗೆ ಕಾರಣರಾಗಿದ್ದಾರೆ ಎಂದು ಗುಡುಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ