ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಧಾನಪರಿಷತ್: ಉಗ್ರಪ್ಪ ಅಧಿಕಾರಾವಧಿ ಮುಕ್ತಾಯ (Ugrappa | BJP | Yeddyurappa | Bangalore | JDS)
Bookmark and Share Feedback Print
 
ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ ತಮ್ಮ ಅಧಿಕಾರಾವಧಿಯ ಕೊನೆಯ ದಿನವೂ ಆಡಳಿತಾರೂಢ ಬಿಜೆಪಿ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್‌ನ ಅವರ ಸದಸ್ಯತ್ವದ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿರುವುದರಿಂದ ವಿರೋಧ ಪಕ್ಷದ ನಾಯಕರಾಗಿ ತಮ್ಮ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಬಜೆಟ್‌ನಲ್ಲಿ ಹೆಚ್ಚುವರಿ ತೆರಿಗೆಗಳನ್ನು ವಿಧಿಸುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿರುವುದು ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ತೋರಿಸುತ್ತದೆ ಎಂದರು.

ಮುಂಬರುವ ಬಜೆಟ್‌ನಲ್ಲಿ ಯೋಜನಾ ಮತ್ತು ಯೋಜನೇತರ ವೆಚ್ಚದಲ್ಲಿ ಸುಮಾರು 15ಸಾವಿರ ಕೋಟಿ ರೂಪಾಯಿಗಳ ಕಡಿತ ಉಂಟಾಗಲಿದೆ ಎಂದರು.

ಬಿಜೆಪಿ ನೇತೃತ್ವದ ಈ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೇ ತಪ್ಪೊಪ್ಪಿಕೊಂಡಿದ್ದಾರೆ ಎಂದು ಟೀಕಿಸಿದರು. ಅಕ್ರಮ ಗಣಿಗಾರಿಕೆ ಕುರಿತಂತೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಸದನದಲ್ಲಿ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಆ ನಿರೀಕ್ಷೆ ಸುಳ್ಳಾಯಿತು ಎಂದರು.

ವಿರೋಧ ಪಕ್ಷದ ನಾಯಕನಾಗಿ ಒಂದು ವರ್ಷ ಐದು ತಿಂಗಳ ಅವಧಿಯಲ್ಲಿ ಸರ್ಕಾರದ ವೈಫಲ್ಯಗಳನ್ನು ಬಯಲಿಗೆಳೆದ ತೃಪ್ತಿ ತಮಗಿದೆ. ಮುಂದಿನ ದಿನಗಳಲ್ಲಿ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಅಲ್ಲದೇ ವಿರೋಧ ಪಕ್ಷದ ಸ್ಥಾನ ಸಿಗಲು ಕಾರಣರಾದ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.
ಸಂಬಂಧಿತ ಮಾಹಿತಿ ಹುಡುಕಿ