ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನಾರ್ದನ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ (Janardana Reddy | OMC | JMFC | BJP | Mining)
Bookmark and Share Feedback Print
 
NRB
ಗಡಿ ಒತ್ತುವರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಂಡೂರು ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

2006ರಲ್ಲಿ ತುಮಟಿ ಪ್ರದೇಶದ ಗಡಿ ಗುರುತು ನಾಶ ಪಡಿಸಿದ್ದಕ್ಕಾಗಿ ಜನಾರ್ದನ ರೆಡ್ಡಿ ಅವರ ವಿರುದ್ಧ ಟಿ.ನಾರಾಯಣ ರೆಡ್ಡಿ ಅವರು ತೋರಣಗಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಡೂರ್ ಜೆಎಂಎಫ್‌ಸಿ ನ್ಯಾಯಾಲಯ ಕಳೆದ ವರ್ಷ ಡಿಸೆಂಬರ್ 30ರಂದೇ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್ ಆದೇಶವನ್ನು ಜಾರಿ ಮಾಡಿತ್ತು.

ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ವತಿಯಿಂದ ತುಮಟಿ ಪ್ರದೇಶದಲ್ಲಿ ಗಡಿ ಒತ್ತುವರಿ ಮತ್ತು ಗಡಿ ಗುರುತು ನಾಶ ಮಾಡಿದ್ದರ ವಿರುದ್ಧ ದೂರನ್ನು ದಾಖಲಿಸಲಾಗಿತ್ತು. ಆದರೆ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಸಂಡೂರ್ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ