ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂರಿಂದ ಭ್ರ,ಷ್ಟಾಚಾರದ ಹಣ ಬಳಕೆ:ಕುಮಾರಸ್ವಾಮಿ (kumara swami yudiyurappa black money)
Bookmark and Share Feedback Print
 
ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ಕಾಲೇಜು, ಕಮರ್ಷಿಯಲ್ ಕಾಂಪ್ಲೆಕ್ಸ್ ಹಾಗೂ ಮೈಸೂರಿನಲ್ಲಿ ಹೊಟೇಲ್ ಕಟ್ಟಡವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಯಾರ ಹಣದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ಎಂಬುದನ್ನು ಸಾರ್ವಜನಿಕರ ಮುಂದಿಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿ ಬಿಜೆಪಿ ಮುಖಂಡರು ಮತ್ತು ಕೇಶವಶಿಲ್ಪದ ಕೆಲ ನಾಯಕರು ನೈಸ್ ಸಂಸ್ಥೆಯಿಂದ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿ ಹೇಳುತ್ತಾರೆಯೇ? ಎಂದು ಪ್ರಶ್ನಿಸಿದರು.

ನೈಸ್ ಅಕ್ಕ ಪಕ್ಕದಲ್ಲಿ ನಮ್ಮ ಕುಟುಂಬದ ಆಸ್ತಿ ಇಲ್ಲ ಎಂದು ತಾನು ಯಾವ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧನಿದ್ದೇನೆ, ಬಿಜೆಪಿ ನಾಯಕರು ಸಹ ಸಿದ್ಧವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಂಥಾಹ್ವಾನ್ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ