ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಪಿಸಿಸಿ ಮಹಿಳಾ ಘಟಕ: ರಾಣಿ ಸತೀಶ್‌ಗೆ ಕೊಕ್-ಮಂಜುಳಾ ಇನ್ (KPCC | Rani sathish | Manjula Naidu | BBMP)
Bookmark and Share Feedback Print
 
ಕಾಂಗ್ರೆಸ್ ಪಕ್ಷದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿದ್ದ ರಾಣಿ ಸತೀಶ್ ಅವರನ್ನು ಬದಲಾಯಿಸಿ ಅವರ ಸ್ಥಾನಕ್ಕೆ ಮಂಜುಳಾ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲಿಯೇ ಕೆಪಿಸಿಸಿ ಪುನರ್ ರಚನೆಯಾಗುವ ಸಾಧ್ಯತೆಗಳು ಇರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಬಿಬಿಎಂಪಿ ಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಮಹಿಳಾ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಹತ್ತರ ಬದಲಾವಣೆಗಳಾಗುವ ಮುನ್ಸೂಚನೆ ನೀಡಿದಂತಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಮಂಜುಳಾ ನಾಯ್ಡು, ಮುಂಬರುವ ಗ್ರಾಮ ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದ್ದು, ಅವರನ್ನು ಕಾಂಗ್ರೆಸ್ನತ್ತ ಸೆಳೆಯಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರೇ ಆಧಾರ ಸ್ತಂಭ. ಯುಪಿಎ ಸರ್ಕಾರದ ಅಧ್ಯಕ್ಷರಾದ ಸೋನಿಯಾಗಾಂಧಿ ಮಾರ್ಗದರ್ಶನದಲ್ಲಿ ಮುನ್ನಡೆಯುವುದಾಗಿ ಹೇಳಿದರು. ಅಲ್ಲದೇ ಮಹಿಳಾ ಮತಗಳನ್ನು ಕಾಂಗ್ರೆಸ್ ಸೆಳೆದು ಪಕ್ಷದ ಸಂಘಟನೆಗೆ ಹೆಚ್ಚು ಮತಗಳನ್ನು ಕಾಂಗ್ರೆಸ್ ಸೆಳೆದು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ