ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾನೂನಿಗೆ ತಿದ್ದುಪಡಿ-ವಿದ್ಯುತ್ ಸಮಸ್ಯೆಗೆ ಪರಿಹಾರ: ಸಿಎಂ (BJP | Yeddyurappa | Mangalore | Dharmasthala)
Bookmark and Share Feedback Print
 
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಖಾಸಗಿ ವಲಯದಿಂದ ಉತ್ಪಾದನೆಯಾಗುವ ವಿದ್ಯುತ್ ಅನ್ನು ರಾಜ್ಯದಲ್ಲಿ ಬಳಸುವಂತೆ ಮಾಡುವ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿದೆ.

ಈ ವಿಷಯ ಪ್ರಕಟಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 2003ರ ಕಾನೂನಿಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ರಾಜ್ಯದಲ್ಲೇ ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ಮಾಡಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

ಜಿಲ್ಲೆಯ ಧರ್ಮಸ್ಥಳ ದೇವಸ್ಥಾನಕ್ಕೆ ಆಗಮಿಸಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗೆ ತಿದ್ದುಪಡಿ ತಂದರೆ ವಿದ್ಯುತ್ ಸಮಸ್ಯೆ ನಿವಾರಣೆಯಾಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಹಲವು ವಿದ್ಯುತ್ ಕಂಪೆನಿಗಳು ವಿದ್ಯುತ್ ಉತ್ಪಾದನೆ ಮಾಡಿ ಬೇರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾದ ವಿದ್ಯುತ್‌ನ್ನು ನಮಗೆ ನೀಡುವಂತೆ ಕಂಪೆನಿಗಳ ಮುಖ್ಯಸ್ಥರ ಜೊತೆ ಅನೌಪಚಾರಿಕೆ ಮಾತುಕತೆ ನಡೆಸಲಾಗಿದೆ. ಇದಕ್ಕೆ ಸಕರಾತ್ಮಕ ಪ್ರತಿಕ್ರಿಯೆ ಕೂಡ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ