ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಮತ ಎಣಿಕೆ ಕೇಂದ್ರಕ್ಕೆ ಹೆಚ್ಚಿನ ಭದ್ರತೆ: ಬಿದರಿ (BBMP | SSLC | Election counting | Shankar Bidari)
Bookmark and Share Feedback Print
 
ಬಿಬಿಎಂಪಿ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಭಾರಿ ಬೆಟ್ಟಿಂಗ್ ನಡೆದಿರುವ ಬೆನ್ನಲ್ಲೆ ಇದೀಗ ಮತ ಎಣಿಕೆ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಏಪ್ರಿಲ್ 5ರಂದು ನಡೆಯುವ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದ್ದು, 27 ಕೇಂದ್ರಗಳಲ್ಲಿ ನಡೆಯುವ ಮತ ಎಣಿಕೆಗೆ ಎಸಿಪಿ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 27 ಮತ ಕೇಂದ್ರಗಳಲ್ಲಿ ನಡೆಯುವ ಮತ ಎಣಿಕೆಗೆ ಅಗತ್ಯ ಭದ್ರತೆ ಕಲ್ಪಿಸಲಾಗಿದ್ದು, ಅದಕ್ಕಾಗಿ ಎಸಿಪಿ ನೇತೃತ್ವದಲ್ಲಿ 200 ಪೊಲೀಸ್ ಅಧಿಕಾರಿಗಳು, 125 ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ಆಯೋಜಿಸಲಾಗುವುದು ಎಂದರು.

ಅಲ್ಲದೆ, ಮತ ಎಣಿಕೆಯ ದಿನದಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮೆರವಣಿಗೆ, ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು, ಘೋಷಣೆ ಕೂಗುವುದನ್ನು ನಿಷೇಧಿಸಿ 144ಸೆಕ್ಷನ್ ಜಾರಿಗೊಳಿಸಲಾಗುವುದು. ಅಲ್ಲದೆ, ಭಾನುವಾರದಂದು ಮದ್ಯದಂಗಡಿ ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಮತ ಎಣಿಕೆಯನ್ನು ಮಧ್ಯಾಹ್ನ 2.30ಕ್ಕೆ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ