ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 2,000 ಹೊಸ ವೈನ್ಸ್; ಪಾನಪ್ರಿಯರಿಗೆ ಯಡ್ಡಿ ಸರಕಾರ ಸಾಥ್ (wine shop | Karnataka | MP Renukacharya | liquor)
Bookmark and Share Feedback Print
 
ಸಾರಾಯಿ ನಿಷೇಧದಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ದಲ್ಲಾಳಿಗಳು ಹುಟ್ಟಿಕೊಂಡಿದ್ದು, ಪಾನಪ್ರಿಯರ ಸುಲಿಗೆ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ರಾಜ್ಯದಾದ್ಯಂತ ಸುಮಾರು 2,000 ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರಕಾರ ನಿರ್ಧರಿಸಿದೆ.

ಪ್ರದೇಶದ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ವೈನ್ ಸ್ಟೋರುಗಳನ್ನು ತೆರೆಯಲು ಸರಕಾರ ಅನುಮತಿ ನೀಡಲಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ಸಾರಾಯಿ ನಿಷೇಧದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೆಕೆಂಡ್ಸ್ ಹಾವಳಿಯೂ ಹೆಚ್ಚಾಗಿದೆ. ಹಾಗಾಗಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಸರಕಾರ ನಿರ್ಧರಿಸಿದೆ. ಅದೇ ಹೊತ್ತಿಗೆ ಕಳ್ಳಭಟ್ಟಿ ಮತ್ತು ನಕಲಿ ಸಾರಾಯಿ ತಯಾರಕರು-ಮಾರಾಟಗಾರರಿಗೆ ಈ ಯೋಜನೆಯ ಸಹಕಾರ - ಲಾಭ ಸಿಗದಂತೆ ಕಡಿವಾಣ ಹಾಕಲಿದ್ದೇವೆ ಎಂದೂ ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ.

ಈ ರೀತಿ ನಕಲಿ ಸಾರಾಯಿ ಮಾರಾಟ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡುವ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಿದ್ದೇವೆ. ಈ ಸಂಬಂಧ ದಾಳಿಯ ನಂತರ ಆರೋಪಿಗಳನ್ನು ಬಂಧಿಸಿ ಪೂರಕ ಪ್ರಕರಣಗಳನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಅಲ್ಲದೆ ಇನ್ನು ಮುಂದಕ್ಕೆ ನೀಡಲಾಗುವ ಮದ್ಯದಂಗಡಿ ಪರವಾನಗಿಯನ್ನು ದೇವಸ್ಥಾನ, ಉದ್ಯಾನವನ, ಶಾಲೆ ಮತ್ತು ಬಸ್ ನಿಲ್ದಾಣಗಳ ಸಮೀಪ ನೀಡದೇ ಇರಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ನಿರುದ್ಯೋಗಿ ಪದವೀಧರರಿಗೆ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ.

ಸಾರಾಯಿ ನಿಷೇಧದಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಮನಗಂಡಿರುವ ಸಚಿವರು, 32 ರೂಪಾಯಿಗಳಿಗೆ ಮಾರಾಟ ಮಾಡಬೇಕಾದ ಮದ್ಯವನ್ನು 45 ರೂಪಾಯಿಗಳಿಗೂ ಹೆಚ್ಚು ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ. ಆ ಮೂಲಕ ದಲ್ಲಾಳಿಗಳು ಭಾರೀ ಹಣ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ