ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿ ತನಿಖೆ ಸಿಬಿಐಗೆ ಒಪ್ಪಿಸಿ: ರಾಜ್ಯಕ್ಕೆ ಕೇಂದ್ರ (CBI | Congress | UPA | BJP | Yeddyurappa | Illigal Mining)
Bookmark and Share Feedback Print
 
ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗಿ ಕಂಪನಿ ಸೇರಿದಂತೆ ಕೆಲವು ಕಂಪನಿಗಳ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಸೂಕ್ತವಾದ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತೊಮ್ಮೆ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಅಕ್ರಮ ಗಣಿಗಾರಿಕೆ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಗಣಿ ಸಚಿವ ಬಿಜೊಯ್ ಕೃಷ್ಣ ಹಂಡಿಕ್ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾರ್ಚ್ 30ರಂದು ಮತ್ತೊಂದು ಪತ್ರ ಬರೆದಿದ್ದು, ಗಣಿ ಅಕ್ರಮಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ, ಅದಕ್ಕೆ ಬೇಕಾದ ಎಲ್ಲಾ ನೆರವುಗಳನ್ನು ನೀಡಲು ಸಿದ್ದ ಎಂದು ಹೇಳಿದ್ದಾರೆ.

ಹೊಸ ಪತ್ರದಲ್ಲಿ 17ಗಣಿ ಅಕ್ರಮಗಳನ್ನು ಪ್ರಸ್ತಾಪಿಸಲಾಗಿದೆ. 2009ರ ನವೆಂಬರ್ 16ರಂದು ಹಂಡಿಕ್ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಯೂಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಆದರೆ, ಅದಕ್ಕೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲವಾಗಿತ್ತು. ಅಲ್ಲದೇ ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದರು.

ಅಕ್ರಮ ಗಣಿಗಾರಿಕೆ ಕುರಿತಂತೆ ತನಿಖೆಗೆ ವಿಶೇಷ ತನಿಖಾ ದಳ ನೇಮಿಸುಂತೆ ಮನವಿ ಮಾಡಿ ಕೇಂದ್ರ ಸರ್ಕಾರ ನಾಲ್ಕು ತಿಂಗಳ ಹಿಂದೆ ಬರೆದ ಪತ್ರದಂತೆ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಎರಡನೇ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ