ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುತೂಹಲ ಕೆರಳಿಸಿದ ರಾಜ್ಯಪಾಲರ ದೆಹಲಿ ಪ್ರಯಾಣ (BJP | Congress | Bharadwaj | Delhi | Deve gowda)
Bookmark and Share Feedback Print
 
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ತಂಗಲಿರುವ ರಾಜ್ಯಪಾಲರ ಭೇಟಿ ಕಾತರ ಮೂಡಿಸಿದೆ. ಈ ಮಧ್ಯೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೂ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯಪಾಲರು ದೆಹಲಿಗೆ ಹೋಗಿರುವುದು ಹಲವು ಅಚ್ಚರಿಗೆ ಎಡೆಮಾಡಿಕೊಟ್ಟಿದೆ.

ಇದೇ ವೇಳೆ ಈ ಕುರಿತು ವಿರೋಧ ಪಕ್ಷಗಳು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಸರ್ಕಾರ ಮನ ಬಂದಂತೆ ರಾಜ್ಯಭಾರ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಹೇಳಿದ್ದವು. ಈ ನಿಟ್ಟಿನಲ್ಲಿ ಈ ಬಗ್ಗೆ ಸಮಗ್ರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ದೆಹಲಿಯಿಂದ ರಾಜ್ಯಪಾಲರಿಗೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಆಗಿ ದೆಹಲಿಗೆ ಪಯಣಿಸಿದ್ದಾರೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಮಾಹಿತಿ ಬರುವ ಸಂಭವವಿದೆ.
ಸಂಬಂಧಿತ ಮಾಹಿತಿ ಹುಡುಕಿ