ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇನ್ಮುಂದೆ ಸ್ಥಳೀಯ ಸಂಸ್ಥೆ ಚುನಾವಣಾ ವೆಚ್ಚಕ್ಕೂ ಕಡಿವಾಣ (BJP | Congress | JDS | Election | Yeddyurappa)
Bookmark and Share Feedback Print
 
ಇನ್ಮುಂದೆ ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಬೇಕಾಬಿಟ್ಟಿ ಖಚ್ಚು ಮಾಡುವುದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಚುನಾವಣಾ ಅಭ್ಯರ್ಥಿಗಳ ವೆಚ್ಚದ ಮೇಲೆ ಮಿತಿ ಹೇರಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ವೆಚ್ಚದ ವಿವರ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈ ಸಂಬಂಧ ಪೌರಾಡಳಿತ ಇಲಾಖೆಯು ಕಾನೂನು ಅಭಿಪ್ರಾಯ ಕೋರಿ ಕಾನೂನು ಇಲಾಖೆಗೆ ಪ್ರಸ್ತಾಪ ಕಳುಹಿಸಿದೆ.

ಈ ಪ್ರಸ್ತಾಪಕ್ಕೆ ಗ್ರೀನ್ ಸಿಗ್ನಲ್ ದೊರೆತ ಕೂಡಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಪೌರ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದರು.

ಇತ್ತೀಚೆಗೆ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೂ ಮಿತಿ ಹೇರಲಾಗಿತ್ತು. ಆ ನಿಟ್ಟಿನಲ್ಲಿ ಇತರ ನಗರ, ಸ್ಥಳೀಯ ಸಂಸ್ಥೆ ಚುನಾವಣೆಗಳಿಗೂ ಅದನ್ನು ವಿಸ್ತರಿಸಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ