ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ (Yeddyurappa | BJP | Mangalore | Aie India express)
Bookmark and Share Feedback Print
 
PTI
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣ ಸಮೀಪ ಸಂಭವಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತ ಘಟನೆಯನ್ನು ವೀಕ್ಷಿಸಲು ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಶೇಷ ಹೆಲಿಕಾಪ್ಟರ್ ಹಾಸನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಶನಿವಾರ ನಡೆದಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್, ಸಚಿವ ಜೀಜಾ ಹರಿಸಿಂಗ್ ಸೇರಿದಂತೆ ಅಧಿಕಾರಿಗಳು ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರತಿಕೂಲ ಹವಾಮಾನ ಗಮನಿಸಿದ ಮುಖ್ಯಮಂತ್ರಿಗಳು ಪೈಲಟ್‌ಗೆ ಬಲವಂತ ಮಾಡಿ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಭೂಸ್ಪರ್ಶ ಮಾಡಲು ತಿಳಿಸಿದ್ದರು ಎನ್ನಲಾಗಿದೆ.

ವಿಮಾನ ದುರಂತದ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿಗೆ ಹೊರಟಿದ್ದ ಮುಖ್ಯಮಂತ್ರಿಗಳು ಪ್ರತಿಕೂಲ ಹವಾಮಾನದಿಂದ ಹೆದರಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಪ್ರತಿಕೂಲ ಹವಾಮಾನ ತಿಳಿಯಾದ ನಂತರ ಮಂಗಳೂರಿಗೆ ಶೀಘ್ರವೇ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮಂಗಳೂರು ವಿಮಾನ ದುರಂತದಲ್ಲಿ 163 ಮಂದಿ ಸಾವು

ದುರಂತದಲ್ಲಿ ಬದುಕುಳಿದವರ ವಿವ
ಸಂಬಂಧಿತ ಮಾಹಿತಿ ಹುಡುಕಿ