ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಿಯುಸಿ ಮರು ಮೌಲ್ಯಮಾಪನ ಅವಧಿ ವಿಸ್ತರಣೆ: ಕಾಗೇರಿ (Puc Revaluation)
Bookmark and Share Feedback Print
 
ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನಾಲ್ಕು ದಿನ ವಿಸ್ತರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 22 ಕೊನೆ ದಿನವಾಗಿತ್ತು. ಆದರೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವಧಿಯನ್ನು ವಿಸ್ತರಿಸಲಾಗಿದ್ದು, ಮೇ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದ್ದಾರೆ.

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕಾರಣಕ್ಕಾಗಿ 42 ಸಾವಿರ ಉತ್ತರ ಪತ್ರಿಕೆಯ ನಕಲು ಪ್ರತಿಗಳಿಗೆ ಬೇಡಿಕೆ ಇದ್ದು, ಈಗಾಗಲೇ 37 ಸಾವಿರ ಉತ್ತರ ಪತ್ರಿಕೆಗಳ ನಕಲು ಕಲ್ಪಿಸಲಾಗಿದೆ. ಇನ್ನೂ ಐದು ಸಾವಿರ ಉತ್ತರ ಪತ್ರಿಕೆಗಳ ನಕಲು ಪ್ರತಿಯನ್ನು ನೀಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ನೀಡಬೇಕಾಗಿದ್ದು, ಈ ಪ್ರಕ್ರಿಯೆ 24 ರಂದು ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಚಿವ ಕಾಗೇರಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಿಯುಸಿ ಮೌಲ್ಯಮಾಪನ, ಅರ್ಜಿ