ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಮುಖಂಡರ ಒಗ್ಗಟ್ಟು ಕಪಟ ನಾಟಕ: ಉದಾಸಿ (Udasi | Congress | BJP | Yeddyurappa | JDS)
Bookmark and Share Feedback Print
 
ನಾಡ ರಕ್ಷಣೆ ನಡಿಗೆ ಮೂಲಕ ಕಾಂಗ್ರೆಸ್ ಮುಖಂಡರು ಬಳ್ಳಾರಿಗೆ ಪಾದಯಾತ್ರೆ ಕೈಗೊಂಡು ಒಗ್ಗಟ್ಟು ಪ್ರದರ್ಶಿಸಿರುವುದು ಕಪಟ ನಾಟಕ ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಟೀಕಿಸಿದ್ದಾರೆ.

ಧಾರವಾಡದಲ್ಲಿ ಆಯೋಜಿಸಲಾಗಿದ್ದ ಮಾವು ಬೆಳೆಗಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ವರದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಚಿವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಡೆಸಿದ ಸಮಾವೇಶದಿಂದ ಬಿಜೆಪಿಗೆ ಏನೂ ಹಾನಿಯಿಲ್ಲ ಎಂದರು.

ಕಲಾಪದಲ್ಲಿ ಎಂಟು ದಿನವೂ ಪಾಲ್ಗೊಳ್ಳದ ಕಾಂಗ್ರೆಸ್ಸಿಗರು ಪಾದಯಾತ್ರೆ ನಡೆಸಿದ್ದಾರೆ. ನಾವು ಸಮಾವೇಶದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮ್ಮ ಪಕ್ಷದ ಮುಖಂಡರು ಹೆದರಿದ್ದಾರೆಂಬುದು ಊಹಾಪೋಹ. ರೆಡ್ಡಿ ಸೋದರರಿಂದಾಗಿ ಒಡೆದ ಮನೆಯಂತಿದ್ದ ಕಾಂಗ್ರೆಸ್ ಒಂದಾಗಿದೆ ಎಂಬುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಕಾಂಗ್ರೆಸ್ ಏನೆಂಬುದು ನನಗೆ ಗೊತ್ತಿದೆ. ಕಾಂಗ್ರೆಸ್ಸಿಗರು ಎಂದಿಗೂ ಒಂದಾಗಿರಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಸಂಪುಟ ಪುನಾರಚನೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಈ ಬಗ್ಗೆ ಯಡಿಯೂರಪ್ಪ ನಿರ್ಧಾರ ಕೈಗೊಳ್ಳಲಿದ್ದಾರೆ. ಪುನಾರಚನೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಮುಖಂಡರ ಮಧ್ಯೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಉದಾಸಿ ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ