ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪ ಚುನಾವಣೆ ನಂತ್ರ ಸಿದ್ದುಗೆ 'ಮಂಗಳಾರತಿ': ಯಡಿಯೂರಪ್ಪ (Siddaramaiah | Yeddyurappa | BJP | Congress | JDS | By election)
Bookmark and Share Feedback Print
 
ಗುಲ್ಬರ್ಗಾ ದಕ್ಷಿಣ ಮತ್ತು ಕಡೂರು ಕ್ಷೇತ್ರದ ಉಪ ಚುನಾವಣೆ ಮುಗಿದ ನಂತರ ಲಕ್ಷಾಂತರ ಯುವಜನರನ್ನು ಸೇರಿಸಿ ಸಿದ್ದರಾಮಯ್ಯಗೆ ಮಂಗಳಾರತಿ ಮಾಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ತಾಲೂಕಿನ ಮತಿಘಟ್ಟದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತಾವು ಮುಖ್ಯಮಂತ್ರಿಯಾದ ನಂತರ ಒಂದೇ ಒಂದು ಟನ್ ಕಬ್ಬಿಣದ ಅದಿರು ವಿದೇಶಕ್ಕೆ ಕಳಿಸಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಲಕ್ಷಾಂತರ ಟನ್ ಅದಿರು ಲೂಟಿಯಾಗಿದೆ. ಆದರೆ, ತಮ್ಮ ತಪ್ಪನ್ನು ಮುಚ್ಚಿಟ್ಟುಕೊಂಡು ಸಿದ್ದರಾಮಯ್ಯ ಪಾದಯಾತ್ರೆ ನಡೆಸಿದ್ದಾರೆ ಎಂದು ಗುಡುಗಿದರು.

ಆರ್ಥಿಕ ನಿರ್ವಹಣೆ ಮತ್ತು ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯ ಸರಕಾರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಆದರೆ, ಅಭಿವೃದ್ದಿಗೆ ಹಣ ಇಲ್ಲ. ಆರ್ಥಿಕವಾಗಿ ರಾಜ್ಯ ದಿವಾಳಿಯಾಗಿದೆ ಎಂದಿರುವ ಸಿದ್ದರಾಮಯ್ಯ, ಹುಸಿ ಸುಳ್ಳು ಹೇಳುವುದನ್ನು ಮೊದಲು ಬಿಡಬೇಕು ಎಂದರು.

ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅಂಡ್ ಕಂಪನಿ ಅವಕಾಶ ಮಾಡಿಕೊಟ್ಟಿದ್ದು. ಅದರ ಪರಿಣಾಮ ಅದಿರು ಲೂಟಿಯಾಗಿದೆ. ಅದನ್ನು ತಡೆಯುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಯಿತು. ಸಿದ್ದರಾಮಯ್ಯವರೆ ನಿಮಗೆ ಗೊತ್ತಿಲ್ಲವೇ ಎಂದು ಆವೇಶದಿಂದ ಗುಡುಗಿದ ಅವರು, ಲಕ್ಷಾಂತರ ಯುವಕರನ್ನು ಸೇರಿಸಿ ನಿಮಗೆ ಮಂಗಳಾರತಿ ಮಾಡಿಸುತ್ತೇನೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ