ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜೆಡಿಎಸ್‌ಗೆ ಸೋಲು-ನನ್ನ ನಿರೀಕ್ಷೆ ಹುಸಿಯಾಗಿದೆ: ವೈಎಸ್‌ವಿ ದತ್ತ (Kaduru | JDS | BJP | Congress | Yeddyurappa | Aruana patil)
Bookmark and Share Feedback Print
 
ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ಅಸಮಾಧಾನದಿಂದ ಕ್ಷೇತ್ರದಲ್ಲಿ ಸೋಲು ಅನುಭವಿಸುವಂತಾಗಿದ್ದು, ಕಡೂರು ಕ್ಷೇತ್ರದ ಸೋಲಿಗೆ ತಾನು ನೈತಿಕ ಹೊಣೆ ಹೊರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ಕ್ಷೇತ್ರದಲ್ಲಿನ ಮತದಾರನ ತೀರ್ಪು ಹೊರಬಿದ್ದಿದೆ. ಗುಲ್ಬರ್ಗಾ ಕ್ಷೇತ್ರದಲ್ಲಿ ಜೆಡಿಎಸ್‌ನ ಅರುಣಾ ಪಾಟೀಲ್ ಜಯಭೇರಿ ಗಳಿಸಿದ್ದಾರೆ. ಬಿಜೆಪಿಯ ಶಿಶಿಲ್ ನಮೋಶಿ ಹಾಗೂ ಕಾಂಗ್ರೆಸ್‌ನ ಡಾ.ಅಜಯ ಸಿಂಗ್ ಪರಾಜಯಗೊಂಡಿದ್ದಾರೆ. ಕಡೂರು ಕ್ಷೇತ್ರದಲ್ಲಿ ಬಿಜೆಪಿಯ ಡಾ.ವಿಶ್ವನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ನ ವೈ.ಎಸ್.ವಿ.ದತ್ತ ಮತ್ತು ಕಾಂಗ್ರೆಸ್‌ನ ಕೆ.ಎಂ.ಕೆಂಪರಾಜು ಸೋಲುಂಡಿದ್ದಾರೆ.

ಇದೀಗ ಕಳೆದ 15 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದನ್ನು ಬಿಟ್ಟರೆ, ಉಳಿದ 13 ಉಪ ಚುನಾವಣೆಯಲ್ಲಿ ಹೀನಾಯವಾಗಿ ಸೋಲಿನ ರುಚಿ ಕಂಡಿತ್ತು. ಹಾಗಾಗಿ ಪಕ್ಷದಲ್ಲಿನ ಮುಖಂಡರ ಅಸಮಾಧಾನ ಗೆಲುವಿಗೆ ಅಡ್ಡಗಾಲು ಹಾಕಿದಂತಾಗಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ರಾಜಕೀಯ ಸವಾಲನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ ಎಂದರು.


ನನ್ನ ನಿರೀಕ್ಷೆ ಹುಸಿಯಾಗಿದೆ-ವೈಎಸ್‌ವಿ ದತ್ತ: ಕಡೂರು ಕ್ಷೇತ್ರದ ಮತದಾರ ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಣ, ಜಾತಿ ಪ್ರಭಾವದಿಂದ ಬಿಜೆಪಿ ಅಭ್ಯರ್ಥಿ ಡಾ.ವಿಶ್ವನಾಥ್ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.

ಕಡೂರು ಕ್ಷೇತ್ರದ ಮತದಾರರು ಜಾತಿ ಆಧಾರದಲ್ಲಿ ಮನ್ನಣೆ ನೀಡಿದ್ದಾರೆ. ಅಷ್ಟೇ ಅಲ್ಲ ವೀರಶೈವರು ಬಂಡೆಗಲ್ಲಿನಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬೆಂಬಲಕ್ಕೆ ನೀಡಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಪಕ್ಷದ ಸಾಧನೆಗೆ ಜನ ಮನ್ನಣೆ-ವಿಶ್ವನಾಥ್: ಆಡಳಿತಾರೂಢ ಬಿಜೆಪಿ ಪಕ್ಷದ ಸಾಧನೆ ಗುರುತಿಸಿ ಕಡೂರು ಕ್ಷೇತ್ರದ ಜನ ಬಿಜೆಪಿ ಪಕ್ಷವನ್ನು ಗೆಲ್ಲಿಸಿದ್ದಾರೆ. ಆದರೆ ಜಾತಿ ಆಧಾರದಲ್ಲಿ ಮನ್ನಣೆ ನೀಡಿದ್ದಾರೆಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಎಲ್ಲಾ ಜಾತಿಯ ಮತದಾರರು ಮತ ಚಲಾಯಿಸಿದ್ದರಿಂದಲೇ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಡಾ.ವೈ.ವಿಶ್ವನಾಥ್ ತಿಳಿಸಿದ್ದಾರೆ.

ಬಿಜೆಪಿ ಮೋಸಕ್ಕೆ ಜನ ಉತ್ತರ ಕೊಟ್ಟಿದ್ದಾರೆ-ಅರುಣಾ ಪಾಟೀಲ್: ಕ್ಷೇತ್ರದ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಜೆಡಿಎಸ್ ಅಭ್ಯರ್ಥಿ ಅರುಣಾ ರೇವೂರ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಪಕ್ಷ ಮಾಡಿದ್ದ ಮೋಸಕ್ಕೆ ಜನರೇ ತಕ್ಕ ಉತ್ತರ ಕೊಟ್ಟಿದ್ದಾರೆ.

ಅರುಣಾ ಪಾಟೀಲ್- ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಬಿಜೆಪಿ ಮೋಸಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುತುವರ್ಜಿ ವಹಿಸುತ್ತೇನೆ ಎಂದು ಭರವಸೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ