ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನನ್ನನ್ನು ಕೆಪಿಸಿಸಿಯಿಂದ ಬಿಡುಗಡೆ ಮಾಡಿ!: ದೇಶಪಾಂಡೆ (KPCC | Congress | Desh pandy | Siddaramaiah | Shiv kumar)
Bookmark and Share Feedback Print
 
ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಪ್ಪಿರುವುದು ಕಾಂಗ್ರೆಸ್ ಮುಖಂಡರಿಗೆ ತೀವ್ರ ಆಘಾತ ತಂದಿದೆ. ಇದೀಗ ಸೋಲಿನ ನೈತಿಕ ಹೊಣೆ ಹೊತ್ತು ವಿಧಾನಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ತನ್ನನ್ನು ವಿಮುಕ್ತಿಗೊಳಿಸುವಂತೆ ಆರ್.ವಿ.ದೇಶಪಾಂಡೆ ಕೂಡ ಪಕ್ಷದ ವರಿಷ್ಠೆ ಸೋನಿಯಾಗಾಂಧಿಗೆ ಪತ್ರ ಬರೆದಿದ್ದಾರೆ.

ಇದೇ ಹಾದಿಯಲ್ಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ನಾಲ್ಕು ತಿಂಗಳ ಮೊದಲೇ ಸ್ಥಾನ ತ್ಯಜಿಸುವ ಬಗ್ಗೆ ಹೈಕಮಾಂಡ್‌ಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಗುಲ್ಬರ್ಗಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂಪ್ರಭು ಪಾಟೀಲ ಅವರೂ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರಿಗೆ ರವಾನಿಸಿದ್ದಾರೆ.

ಏತನ್ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಅವಧಿ ಪೂರ್ಣಗೊಂಡಿದ್ದು, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಿರುವುದರಿಂದ ದೇಶಪಾಂಡೆ ಮತ್ತು ಡಿಕೆಶಿ ರಾಜೀನಾಮೆ ಪತ್ರಕ್ಕೆ ಯಾವುದೇ ಮನ್ನಣೆ ಇಲ್ಲದಂತಾಗಿದೆ.

ಒಟ್ಟಾರೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಾಲು, ಸಾಲು ಸೋಲಿನ ಸುಳಿಗೆ ಸಿಕ್ಕಿರುವುದು ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾಕು ಎಂಬಂತೆ ರಾಜೀನಾಮೆ ತಂತ್ರಕ್ಕೆ ಶರಣಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ, ವಲಸಿಗ, ಮೂಲ ಕಾಂಗ್ರೆಸ್ಸಿಗ, ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಆಯ್ಕೆ ಮೇಲೆ ಕಣ್ಣಿಟ್ಟು ರಾಜೀನಾಮೆ ನೀಡಿದ್ದಾರೆಂಬುದು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿರುವ ಮಾತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ